ADVERTISEMENT
Wednesday, March 25, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ಮರಣಮೃದಂಗ, ಮೋದಿಗೆ ಸೋನಿಯಾ ಪತ್ರ, ಲಾಲೂಗೆ ಕ್ಲೀನ್ ಚಿಟ್, ಕಂಗನಾ ಗನ್ ಮ್ಯಾನ್ ವಿರುದ್ಧ ರೇಪ್ ಕೇಸ್ : TOP 10 ನ್ಯೂಸ್

Namratha Rao by Namratha Rao
May 22, 2021
in Newsbeat, Saaksha Special, ಎಸ್ ಸ್ಪೆಷಲ್
Share on FacebookShare on TwitterShare on WhatsappShare on Telegram

ಕೊರೊನಾ ಮರಣಮೃದಂಗ, ಮೋದಿಗೆ ಸೋನಿಯಾ ಪತ್ರ, ಲಾಲೂಗೆ ಕ್ಲೀಸ್ ಚೀಟ್, ಕಂಗನಾ ಗನ್ ಮ್ಯಾನ್ ವಿರುದ್ಧ ರೇಪ್ ಕೇಸ್ : TOP 10 ನ್ಯೂಸ್

ಕೊರೊನಾ ಮರಣಮೃದಂಗ

ನವದೆಹಲಿ : ಭಾರತದಲ್ಲಿ ಕೊರೊನಾ ಮರಣಕೇಕೆ ಮುಂದುವರೆದಿದೆ.ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 2,57,299 ಜನರಲ್ಲಿ ಸೋಂಕು ಪತ್ತೆಯಾಗಿದೆ. 4,194 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,62,89,290ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 2,95,525 ಕ್ಕೆ ಏರಿಕೆಯಾಗಿದೆ. ಇನ್ನು ಕಳೆದ 24 ಗಂಟೆಯಲ್ಲಿ 3,57,630 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಈವರೆಗೂ 2,30,70,365 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿನ್ನೂ 29,23,400 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ದೇಶದಲ್ಲಿ ನಿಲ್ಲದ ಕೊರೊನಾ ಮರಣಕೇಕೆ : ಕಳೆದ 24 ಗಂಟೇಲಿ 4,194 ಬಲಿ

ಇಂದು 8ಸಾವಿರ ಕೇಸ್

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಬ್ಬರ ಮುಂದುವರೆದಿದೆ. ನಗರದಲ್ಲಿಂದು 8246 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಬೊಮ್ಮನಹಳ್ಳಿ 813 , ದಾಸರಹಳ್ಳಿ 256, ಬೆಂಗಳೂರು ಪೂರ್ವ 1038, ಮಹಾದೇವಪುರ 1410, ಆ???ಆರ್ ನಗರ 595, ಬೆಂಗಳೂರು ದಕ್ಷಿಣ 798, ಬೆಂಗಳೂರು ಪಶ್ಚಿಮ 626, ಯಲಹಂಕ 605 ಜನರಲ್ಲಿ ಪಾಸಿಟಿವ್ ದೃಢಪಟ್ಟಿದೆ. ನಗರದಲ್ಲಿನ್ನೂ 2,89,131 ಸಕ್ರಿಯ ಪ್ರಕರಣಗಳಿವೆ.

Related posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

March 25, 2026
ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

March 25, 2026

ಬೆಂಗಳೂರಲ್ಲಿ ಇಂದು 8246 ಜನರಲ್ಲಿ ಕೋವಿಡ್ ಪಾಸಿಟಿವ್

ರಾಜ್ಯಕ್ಕೆ ಬಂತು ಆಕ್ಸಿಜನ್

ಇಂದು ಏಳು ಮತ್ತು ಎಂಟನೇ ಹಂತದಲ್ಲಿ 240 ಟನ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ. 7 ನೇ ಹಂತದಲ್ಲಿ ಆರು ಕಂಟೈನರ್ ಗಳನ್ನ ಹೊತ್ತು ತಂದಿದ್ದ ರೈಲು ನಿನ್ನೆ ರಾತ್ರಿ ಬೆಂಗಳೂರಿಗೆ ತಲುಪಿತ್ತು. 8ನೇ ರೈಲು ಇಂದು ಬೆಳಗ್ಗೆ 11 ಗಂಟೆಗೆ ಕಂಟೈನರ್ ಗಳಲ್ಲಿ 120 ಟನ್ ಆಕ್ಸಿಜನ್ ಹೊತ್ತು ಬೆಂಗಳೂರಿಗೆ ಬಂದಿದೆ.

ಸಿದ್ದರಾಮಯ್ಯ ಟ್ವೀಟ್ ಕಿಡಿ

ಬೆಂಗಳೂರು : ಕೊರೊನಾವನ್ನು ಔಷದಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಕಿಡಿಕಾರಿದ್ದಾರೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಹೊರಡಿಸಿರುವ ಸುತ್ತೋಲೆ ಉಲ್ಲೇಖಿಸಿ ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಕೊರೊನಾ ಪರೀಕ್ಷೆ ಕಡಿಮೆಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ ರಾಜ್ಯ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು. ಮುಖ್ಯಮಂತ್ರಿ ಮತ್ತು ಸಚಿವ ಡಾ.ಕೆ.ಸುಧಾಕರ್ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ ಎಂದು ಬರೆದುಕೊಂಡಿದ್ದಾರೆ.

ಕೊರೊನಾವನ್ನು ಔಷಧಿ ಮೂಲಕ ಎದುರಿಸಬೇಕು ಸುಳ್ಳುಗಳಿಂದಲ್ಲ : ಸರ್ಕಾರಕ್ಕೆ ಸಿದ್ದು ಚಾಟಿ

ಮೋದಿಗೆ ಸೋನಿಯಾ ಪತ್ರ

ಕೊರೊನಾ ಹೆಮ್ಮಾರಿಯ ಕಾಟ ಮಧ್ಯೆ ದೇಶದಲ್ಲಿ ಬ್ಲಾಕ್ ಫಂಗಸ್ ಸಂಕಷ್ಟ ಕೂಡ ಜನರನ್ನು ಆತಂಕಕ್ಕೆ ಗುರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಬ್ಲಾಕ್ ಫಂಗಸ್ ಗೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.ಸೋನಿಯಾ ಗಾಂಧಿ ತಮ್ಮ ಪತ್ರದಲ್ಲಿ ಬ್ಲಾಕ್ ಸೋಂಕಿಗೊಳಗಾಗಿರುವ ರೋಗಿಗಳಿಗೆ ತ್ವರಿತ ಗತಿಯಲ್ಲಿ ಪರಿಹಾರ ನೀಡಲು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಬ್ಲಾಕ್ ಫಂಗಸ್ ಗೆ ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಿ : ಮೋದಿಗೆ ಸೋನಿಯಾ ಪತ್ರ

ಲಾಲೂಗೆ ಕ್ಲೀನ್ ಚಿಟ್

ನವದೆಹಲಿ: ಡಿಎಲ್‍ಎಫ್ ಲಂಚ ಪ್ರಕರಣದಲ್ಲಿ ಮಾಜಿ ಸಚಿವ ಲಾಲು ಪ್ರಸಾದ್ ಯಾದವ್ ಅವರಿಗೆ ಸಿಬಿಐ ಕ್ಲೀನ್ ಚಿಟ್ ನೀಡಿದೆ ಎಂದು ವರದಿಯಾಗಿದೆ. ಲಾಲು ಪ್ರಸಾದ್ ಯಾದವ್ ವಿರುದ್ಧ ಯಾವುದೇ ಪುರಾವೆಗಳು ಕಂಡುಬಂದಿಲ್ಲವಾದ್ದರಿಂದ ಸಿಬಿಐ ಕ್ಲೀನ್ ಚೀಟ್ ನೀಡಿದೆ. ಈ ಪ್ರಕರಣದಲ್ಲಿ ಲಾಲು ಈಗಾಗಲೇ ಮೂರೂವರೆ ವರ್ಷ ಜೈಲುವಾಸ ಅನುಭವಿಸಿದ್ದಾರೆ. ಈ ಪ್ರಕರಣದಲ್ಲಿ ಸಿಬಿಐ ಕ್ಲೀನ್ ಚಿಟ್ ನೀಡಿದ್ದರೂ ಸಹ … ಆದಾಯ ತೆರಿಗೆ ಇಲಾಖೆ ತನ್ನ ತನಿಖೆಯನ್ನು ಮುಂದುವರಿಸಲಿದೆ.

ಡಿಎಲ್ ಎಫ್ ಲಂಚ ಕೇಸ್ : ಲಾಲೂಗೆ ಕ್ಲೀನ್ ಚೀಟ್

ಮತ್ತೆ 10 ಮೃತ ದೇಹ ಪತ್ತೆ

ಮಹಾರಾಷ್ಟ : ಮುಂಬೈ ತಟದ ಅರಬ್ಬೀ ಸಮುದ್ರದಲ್ಲಿ ಮತ್ತೆ 10 ಮೃತದೇಹಗಳು ಪತ್ತೆಯಾಗಿದೆ.ಮೇ 17ರಂದು ತೌಕ್ತೆ ಚಂಡಮಾರುತದ ಆರ್ಭಟದಿಂದಾಗಿ ಮುಂಬೈ ತಟದ ಅರಬ್ಬೀ ಸಮುದ್ರದಲ್ಲಿ ನಡೆದ ಪಿ-305 ಬೋಟ್ ಕೊಚ್ಚಿ ಹೋಗಿತ್ತು. ನೌಕೆಯಲ್ಲಿದ್ದ 261 ಜನರ ಪೈಕಿ 188 ಮಂದಿಯನ್ನು ರಕ್ಷಿಸಲಾಗಿದ್ದು, ಈವರೆಗೆ 61 ಜನರ ಮೃತದೇಹ ಸಿಕ್ಕಿದೆ. 61ರ ಪೈಕಿ 26 ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಮತ್ತು ಇತರ ವಿಧಿವಿಧಾನಗಳ ನಂತರ ಮೃತರ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

ತುಟ್ಟಿಭತ್ಯೆ ಹೆಚ್ಚಳ

ಕೇಂದ್ರ ಸರ್ಕಾರದ ಕೈಗಾರಿಕಾ ನೌಕರರಿಗೆ ಕೇಂದ್ರ ಕಾರ್ಮಿಕ ಸಚಿವಾಲಯ ಸಿಹಿ ಸುದ್ದಿನೀಡಿದ್ದು, ತುಟ್ಟಿಭತ್ಯೆ (ಡಿಎ) ಹೆಚ್ಚಿಸಿರುವುದಾಗಿ ತಿಳಿಸಿದೆ.
ಸದ್ಯ ಕೇಂದ್ರ ಕೈಗಾರಿಕಾ ನೌಕರರಿಗೆ ಮಾಸಿಕವಾಗಿ 105 ರೂ. ತುಟ್ಟಿಭತ್ಯೆ ನೀಡಲಾಗುತ್ತಿತ್ತು. ಇದನ್ನ ಈಗ 210 ರೂ.ಗೆ ಹೆಚ್ಚಿಸಲಾಗಿದೆ. ಇದರಿಂದ ದೇಶಾದ್ಯಂತ 1.50 ಕೋಟಿ ಕಾರ್ಮಿಕರು ಇದರ ಲಾಭ ಪಡೆದುಕೊಳ್ಳಲಿದ್ದಾರೆ.ಈ ಹೆಚ್ಚಳವು ಏಪ್ರಿಲ್ 1ರಿಂದ ಪೂರ್ವಾನ್ವಯವಾಗಿ ಜಾರಿಯಾಗಲಿದ್ದು, ಇದು ನೌಕರರ ಕನಿಷ್ಠ ವೇತನದ ದರ ಹೆಚ್ಚಳಕ್ಕೂ ಕಾರಣವಾಗುತ್ತದೆ ಎಂದು ಕಾರ್ಮಿಕ ಸಚಿವಾಲಯ ಹೇಳಿದೆ.

ಕೇಂದ್ರ ಸರ್ಕಾರದ ಕೈಗಾರಿಕಾ ನೌಕರರಿಗೆ ಸಿಹಿ ಸುದ್ದಿ..!

ಕಂಗನಾ ಗನ್ ಮ್ಯಾನ್ ವಿರುದ್ಧ ರೇಪ್ ಕೇಸ್

ಬಾಲಿವುಡ್ ನ ಕಾಂಟ್ರವರ್ಸಿ ಕ್ವೀನ್ ಕಂಗನಾ ರಣಾವತ್ ಗನ್ ಮ್ಯಾನ್ ವಿರುದ್ಧ ಅತ್ಯಾಚಾರದ ಆರೋಪ ಕೇಳಿಬಂದಿದೆ. ಮುಂಬೈಯ ಮೇಕಪ್ ಕಲಾವಿದೆಯೊಬ್ಬರು ತಮ್ಮ ಮೇಲೆ ಅತ್ಯಾಚಾರವೆಸಗಿರುವುದಾಗಿ ಕಂಗನಾ ಗನ್ ಮ್ಯಾನ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ಎಂದು ಹೇಳಿಕೊಂಡಿರುವ ಮಹಿಳೆ ತನ್ನನ್ನ ಮದುವೆಯಾಗುವುದಾಗಿ ನಂಬಿಸಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ 50 ಸಾವಿರ ರೂಪಾಯಿಗಳನ್ನ ಪಡೆದು ವಂಚಿಸಿದ್ದಾನೆ ಎಂದು ಆರೋಪ ಮಾಡಿದ್ದಾರೆ.

ಕಂಗನಾ ಗನ್ ಮ್ಯಾನ್ ವಿರುದ್ಧ ಅತ್ಯಾಚಾರ ಆರೋಪ – ಕರ್ನಾಟಕದಲ್ಲಿ ತಲೆಮರೆಸಿಕೊಂಡಿರುವ ಶಂಕೆ

ಮಹಿ ಬೈಗುಳಗಳೇ ನನ್ನ ಬೆಳವಣಿಗೆಗೆ ಕಾರಣ

ಭಾರತ ತಂಡದ ಬೌಲರ್ ದೀಪಕ್ ಚಹಾರ್, ತಾವೂ ಪವರ್ ಪ್ಲೇ ಬೌಲರ್ ಆಗಿ ಯಶಸ್ವಿಯಾಗಲು ಎಂಎಸ್ ಧೋನಿ ಕಾರಣ ಎಂದು ಹೇಳಿದ್ದಾರೆ.ಮಹಿ ಭಾಯ್ ನನ್ನನ್ನು ಪವರ್ ಪ್ಲೇ ಬೌಲರ್ ಆಗಿ ಮಾಡಿದರು. ಅವರ ಯಾವಾಗಲೂ ನನ್ನನ್ನು’ನೀನು ನನ್ನ ಪವರ್ ಪ್ಲೇ ಬೌಲರ್’ ಎಂದು ಹೇಳುತ್ತಿರುತ್ತಾರೆ. ಅವರು ಬಹುಪಾಲು ಪಂದ್ಯಗಳಲ್ಲಿ ನನಗೆ ಮೊದಲ ಓವರ್ ಬೌಲಿಂಗ್ ಮಾಡಲು ಕೊಡುತ್ತಾರೆ. ನಾನು ಅವರಿಂದ ಸಾಕಷ್ಟು ಬಾರಿ ಬೈಯಿಸಿಕೊಂಡಿದ್ದೇನೆ. ಆದರೆ, ಅವರ ಆ ಮಾತುಗಳು ಮತ್ತು ಮಾರ್ಗದರ್ಶನವೇ ನನ್ನ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಹಾರ್ ಹೇಳಿದ್ದಾರೆ.

 

Tags: crime newsdaily news updatesfilmInternationalnatinoalpoliticsSportstop news
ShareTweetSendShare
Join us on:

Related Posts

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

ಆರ್ ಸಿಬಿ ಕಲಿಗಳ ಜತೆ ಕನ್ನಡಿಗರ ನಂದಿನಿ ದರ್ಬಾರ್ ಐಪಿಎಲ್ ಮೂಲಕ ವಿಶ್ವಮಟ್ಟಕ್ಕೆ ಲಗ್ಗೆ ಇಡಲು ಕೆಎಂಎಫ್ ಮಾಸ್ಟರ್ ಪ್ಲಾನ್

by Shwetha
March 25, 2026
0

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಪ್ರತೀಕವಾಗಿರುವ ಕೆಎಂಎಫ್ ನ ನಂದಿನಿ ಬ್ರ್ಯಾಂಡ್ ಇದೀಗ ಕ್ರಿಕೆಟ್ ಜಗತ್ತಿನ ರಣಕಣಕ್ಕೆ ಇಳಿದಿದೆ. ಜಗತ್ತಿನಾದ್ಯಂತ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು...

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

ಸದ್ಯಕ್ಕೆ ಗ್ರಾಮ ಪಂಚಾಯ್ತಿ ಚುನಾವಣೆ ಇಲ್ಲ??

by Shwetha
March 25, 2026
0

ರಾಜ್ಯದಲ್ಲಿ ಬಹುಕಾಲದಿಂದ ಮುಂದೂಡಲಾಗುತ್ತಿರುವ ಗ್ರಾಮ ಪಂಚಾಯ್ತಿ ಚುನಾವಣೆಗಳು ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಕಾಣುತ್ತಿದೆ. ಸುಮಾರು 5,950 ಗ್ರಾಮ ಪಂಚಾಯತ್‌ಗಳ ಚುನಾವಣೆಗೆ ಸಂಬಂಧಿಸಿದಂತೆ ಮೀಸಲು ಪಟ್ಟಿಯನ್ನು ಅಂತಿಮಗೊಳಿಸಲು...

ಬೆಂಗಳೂರಿನ ವಾಹನ ಸವಾರರೇ ಎಚ್ಚರ  ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ  ದಂಡ ಗ್ಯಾರಂಟಿ!

ಬೆಂಗಳೂರಿನ ವಾಹನ ಸವಾರರೇ ಎಚ್ಚರ ಇಂದಿನಿಂದ ಮತ್ತೆ ಶುರುವಾಗಲಿದೆ ಟೋಯಿಂಗ್ ನೋ ಪಾರ್ಕಿಂಗ್ ಜಾಗದಲ್ಲಿ ಗಾಡಿ ನಿಲ್ಲಿಸಿದರೆ ಬೀಳಲಿದೆ 2000 ರೂಪಾಯಿ ದಂಡ ಗ್ಯಾರಂಟಿ!

by Shwetha
March 25, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವ ಮುನ್ನ ನೂರು ಬಾರಿ ಯೋಚಿಸಿ. ಏಕೆಂದರೆ ನಗರದಲ್ಲಿ ಸಂಚಾರಿ ಪೊಲೀಸರು ಮತ್ತೆ ಟೋಯಿಂಗ್ ಅಸ್ತ್ರವನ್ನು ಕೈಗೆತ್ತಿಕೊಂಡಿದ್ದಾರೆ....

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

ತೈಲ ಕೊರತೆ ನೀಗಿಸಲು ಎಲ್ಲ ಪ್ರಯತ್ನಗಳು ನಡೆಯುತ್ತಿವೆ: ಮೋದಿ

by Shwetha
March 25, 2026
0

ಪಶ್ಚಿಮ ಏಷ್ಯಾದಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಗಳ ನಡುವೆಯೂ ತೈಲ ಕೊರತೆಯನ್ನು ಎದುರಿಸಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ...

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

ಕೇರಳ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಅಭಿನಂದನೆಗಳು -ಹೈಕಮಾಂಡ್ ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ಕೇರಳಕ್ಕೆ ಹತ್ತು ಕೋಟಿ ನೆರವು : ಆರ್ ಅಶೋಕ್ ಆಕ್ರೋಶ

by Shwetha
March 25, 2026
0

ಬೆಂಗಳೂರು: ರಾಜ್ಯದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವಾಗ, ದೆಹಲಿ ನಾಯಕರನ್ನು ಮೆಚ್ಚಿಸಿ ತಮ್ಮ ಮುಖ್ಯಮಂತ್ರಿ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಏಕೈಕ ಉದ್ದೇಶದಿಂದ ನೆರೆ ರಾಜ್ಯ ಕೇರಳಕ್ಕೆ 10 ಕೋಟಿ ರೂಪಾಯಿಗಳ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram