ಇನ್ನೂ 2 ವರ್ಷ ಯಡಿಯೂರಪ್ಪ ಅವರೇ ನಮ್ಮ ಸಿಎಂ : ನಿರಾಣಿ
ಮೈಸೂರು : ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಇಲ್ಲ. ಇನ್ನೂ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ನಮ್ಮ ಮುಖ್ಯಮಂತ್ರಿ ಎಂದು ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ಸಿಎಂ ಬದಲಾವಣೆ ಬಗ್ಗೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪನವರ ಆಡಳಿತ ಉತ್ತಮವಾಗಿದೆ.
ಕೋವಿಡ್ ಸಂದರ್ಭದಲ್ಲಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾಯಕತ್ವ ಬದಲಾವಣೆ ಕೇವಲ ಊಹಾಪೋಹ ಅಷ್ಟೇ. ಮುಂದಿನ ಚುನಾವಣೆ ಕೂಡಾ ಯಡಿಯೂರಪ್ಪನವರ ನೇತೃತ್ವದಲ್ಲೇ ನಡೆಯಲಿದೆ ಎಂದು ಹೇಳಿದರು.
ಇನ್ನು ಆಕ್ಸಿಜನ್ ಕುರಿತು ಮಾತನಾಡಿ ರಾಜ್ಯದಲ್ಲಿ ಆಕ್ಸಿಜನ್ ಕೊರತೆಯಿಲ್ಲ. ನಮ್ಮಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ಇದೆ.
ಅದನ್ನು ಶೇಖರಣೆ ಮಾಡಲು ಕಂಟೇನರ್ ಗಳ ಕೊರತೆಯಿದೆ. ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ ಎಂದು ಮಾಹಿತಿ ನೀಡಿದರು.