ಕೊರೊನಾ ಸೋಂಕಿತರಿಗೆ ನೆರವಾಗಿರುವ ‘ಉಸಿರು’ ತಂಡದ ಜೊತೆಗೆ ಕೈಜೋಡಿಸಿದ ದರ್ಶನ್
ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಇದೇ ರೀತಿ ನೀತು ಶೆಟ್ಟಿ, ಕವಿರಾಜ್, ಸಾಧು ಕೋಕಿಲ ಸೇರಿದಂತೆ ಹಲವರು ಒಟ್ಟಿಗೆ ಸೇರಿ ಕೋವಿಡ್ ಸೋಂಕಿತರಿಗೆ ನೆರವಾಗಲು ತಂಡಕಟ್ಟಿಕೊಂಡಿದ್ದು, ‘ಉಸಿರು’ ಎಂದು ಹೆಸರು ನೀಡಿದ್ದಾರೆ..
ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ಕೊರೊನಾ ರೋಗಿಗಳಿಗೆ ಅವರ ಮನೆಗಳಿಗೆ ತೆರಳಿ ಉಚಿತವಾಗಿ ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ನೀಡುವ ಕಾರ್ಯವನ್ನು ಉಸಿರು ತಂಡ ಮಾಡುತ್ತಿದ್ದಾರೆ. ಕೊರೊನಾದಿಂದ ಉಸಿರಾಟದ ಸಮಸ್ಯೆ ಎದುರಿಸುತ್ತಿರುವವರು ‘ಉಸಿರು’ ಸಂಪರ್ಕಿಸಿದಲ್ಲಿ ಅವರ ಮನೆಗೆ ತೆರಳಿ ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ತಂಡದ ಸ್ವಯಂ ಸೇವಕರು ಅಳವಡಿಸುತ್ತಾರೆ.
ಈ ನಡುವೆ ‘ಉಸಿರು’ ತಂಡದ ಜೊತೆಗೆ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೈಜೋಡಿಸಿದ್ದು, ಕೊರೊನಾ ಸೋಂಕಿತರಿಗೆ ‘ಉಸಿರಾ’ಗಲು ಮುಂದಾಗಿದ್ದಾರೆ. ‘ಉಸಿರು’ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಡಿ ಬಾಸ್ ಸಹ ‘ಉಸಿರು’ ತಂಡ ಸೇರಿಕೊಂಡು ತಂಡ ಮಾಡುತ್ತಿರುವ ಸೇವೆಗೆ ಸೂಕ್ತ ನೆರವು ನೀಡಲಿದ್ದಾರೆ.
ಈ ಬಗ್ಗೆ ಕವಿರಾಜ್ ಅವರು ಫೇಸ್ ಬುಕ್ ನಲ್ಲಿ ಮಾಹಿತಿ ಹಂಚಿಕೊಂಡು ದರ್ಶನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ‘ಉಸಿರು’ ತಂಡದ ಸೇವೆಯನ್ನು ಮೈಸೂರಿಗೂ ವಿಸ್ತರಣೆ ಮಾಡಿದ್ದು ಲಾಕ್ಡೌನ್ ಆದಾಗಿನಿಂದಲೂ ಮೈಸೂರಿನಲ್ಲಿಯೇ ವಾಸ್ತವ್ಯ ಹೂಡಿರುವ ದರ್ಶನ್ ಅವರು ‘ಉಸಿರು’ ತಂಡದ ಮೈಸೂರಿನ ಸೇವೆಗೆ ಅಗತ್ಯ ನೆರವು ನೀಡಲಿದ್ದಾರೆ ಎನ್ನಲಾಗುತ್ತಿದೆ. ದರ್ಶನ್ ಸಹೋದರ ದಿನಕರ್ ತೂಗುದೀಪ್ ಸಹ ಈ ತಂಡದಲ್ಲಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








