ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಸೇರಿದಂತೆ ಹಲವು ಮುನ್ನೆಚ್ಚರಿಕಾ ಕ್ರಮಗಳ ಹೊರತಾಗಿಯೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಸರ್ಕಾರ ಹರಸಾಹಸ ಪಡುತ್ತಿದೆ. ಏತನ್ಮಧ್ಯೆ ಸದ್ಯದ ಪರಿಸ್ಥಿತಿ ಪರಿಶೀಲನೆಗೆ ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ಕಾಂಗ್ರೆಸ್ ನಾಯಕರ ಸಮಿತಿ ರಚನೆ ಮಾಡಿದ್ದಾರೆ.
ದೇಶದಲ್ಲಿ ಕೊರೊನಾ ವೈರಸ್ ಕಾಣಿಸಿಕಕೊಂಡಾಗಿನಿಂದಲೂ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಕಾಂಗ್ರೆಸ್ ನ ಹಲವು ನಾಯಕರು ಈಗಾಗಲೇ ಕೆಲ ಸಲಹೆಗಳನ್ನೂ ನೀಡಿದ್ದಾರೆ. ಏತನ್ಮಧ್ಯೆ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪರಿಸ್ಥಿತಿ ಅವಲೋಕಿಸಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದಲ್ಲಿ 11 ಮಂದಿ ಕಾಂಗ್ರೆಸ್ ನಾಯಕರ ಸಮಿತಿ ರಚಿಸಿದ್ದಾರೆ. ಈ ಸಮಿತಿಯಲ್ಲಿ ರಾಹುಲ್ ಗಾಂಧಿ, ಚಿದಂಬರಂ, ಕೆ.ಸಿ.ವೇಣುಗೋಪಾಲ್ ಸೇರಿದಂತೆ 11 ಮಂದಿ ಇದ್ದಾರೆ. ಈ ಸಮಿತಿ ಪ್ರತಿದಿನಗಳ ಬೆಳವಣಿಗೆ ಕುರಿತು ಚರ್ಚೆ ನಡೆಸಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.








