ADVERTISEMENT
Wednesday, July 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Mumbai Karnataka

ಆಶಾಕಾರ್ಯಕರ್ತೆಯರಿಗೆ ಮಾಸ್ಕ್, ಗ್ಲೌಸ್ ನೀಡದಿದ್ದಕ್ಕೆ ಬಿ.ಸಿ‌.ಪಾಟೀಲ್ ತರಾಟೆ

Mahesh M Dhandu by Mahesh M Dhandu
May 25, 2021
in Mumbai Karnataka, Newsbeat, ಮುಂಬೈ ಕರ್ನಾಟಕ
Share on FacebookShare on TwitterShare on WhatsappShare on Telegram

ಆಶಾಕಾರ್ಯಕರ್ತೆಯರಿಗೆ ಮಾಸ್ಕ್,ಗ್ಲೌಸ್ ನೀಡದಿದ್ದಕ್ಕೆ ಕೃಷಿ ಸಚಿವ ಬಿ.ಸಿ‌.ಪಾಟೀಲ್ ತರಾಟೆ

  : ಆಶಾ ಕಾರ್ಯಕರ್ತೆಯರಿಗೆ ಮಾಸ್ಕ್ ಹಾಗೂ ಹ್ಯಾಂಡ್ ಗ್ಲೌಸ್, ಸ್ಯಾನಿಟೈಜರ್ ನೀಡದ ಅಧಿಕಾರಿಗಳನ್ನು ಹಿರೇಕೆರೂರು ಮತಕ್ಷೇತ್ರದ ಶಾಸಕರೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

Related posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

July 1, 2026
ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

July 1, 2026

ಮಂಗಳವಾರ ಬಿ.ಸಿ ಪಾಟೀಲರು ಹಿರೇಕೆರೂರು ಪಟ್ಟಣದ ತಹಶಿಲ್ದಾರರ ಕಚೇರಿಯಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು ಖಾಸಗಿ ವೈದ್ಯರ ಜೊತೆ ಕೋವಿಡ್ 19 ಪರಿಸ್ಥಿತಿಯ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಕೆಲ ಆಶಾ ಕಾರ್ಯಕರ್ತರು ಸಚಿವರ ಬಳಿ ಬಂದು ತಮಗೆ ಆರೋಗ್ಯ ಇಲಾಖೆಯಿಂದ ಯಾವುದೇ ಮುನ್ನೆಚ್ಚರಿಕಾ ಆರೋಗ್ಯ ಸಾಧನಗಳನ್ನು ವಿತರಿಸಿಲ್ಲ ಎಂದು ಅಳಲನ್ನು ಹಂಚಿಕೊಂಡರು.

ಈ ವೇಳೆ ಆಶಾಕಾರ್ಯಕರ್ತೆಯರ ಸಮಸ್ಯೆ ಆಲಿಸಿದ ಬಿ.ಸಿ.ಪಾಟೀಲರು,ತಾಲೂಕು ಮತ್ತು ಜಿಲ್ಲಾ ವೈದ್ಯಾಧಿಕಾರಿಗಳನ್ನು ದೂರವಾಣಿ ಮೂಲಕ ತರಾಟೆಗೆ ತೆಗೆದುಕೊಂಡು,ಕೊರೊನಾ ಸೋಂಕನ್ನೂ ಲೆಕ್ಕಿಸದೇ ಆಶಾಕಾರ್ಯಕರ್ತರು ಮನೆಮನೆಗೆ ತೆರಳಿ ಜನರಿಗೆ ಆರೋಗ್ಯದ ಅರಿವು ಹಾಗೂ ಸೋಂಕಿತರ ಮಾಹಿತಿ ಪಡೆಯುತ್ತಿದ್ದಾರೆ.

BC Patil

ಕೊರೋನಾ ಸೇವೆಯಲ್ಲಿ ಮುಂಚೂಣಿಯಲ್ಲಿ ದುಡಿಯುತ್ತಿದ್ದಾರೆ. ಇಂತವರಿಗೆ ಜಿಲ್ಲಾ ಹಾಗೂ ತಾಲೂಕು ವೈದ್ಯಾಧಿಕಾರಿಗಳು ಮಾಸ್ಕ್,ಗ್ಲೌಸ್,ಸ್ಯಾನಿಟೈಜರ್ ಪೂರೈಸದಿದ್ದರೆ ಹೇಗೆ..? ಇದೆಲ್ಲವನ್ನು ಬಳಸಬೇಕು ಎಂದು ನಾವೇ ಹೇಳುತ್ತೇವೆ.

ಅದನ್ನೇ ಪೂರೈಸದಿದ್ದರೆ ಹೇಗೆ..? ನಿಜಕ್ಕೂ ಇದು ಗಂಭೀರ ವಿಚಾರ.ತಾಲೂಕು ಜಿಲ್ಲಾಡಳಿತ ಇಲಾಖೆ ಎಂದು ಅವರಿವರ ಮೇಲೆ ನೆಪ ಸಬೂಬು ಹೇಳದೇ ಈ ಕೂಡಲೇ ಆಶಾ ಕಾರ್ಯಕರ್ತೆಯರಿಗೆ ಇದೆಲ್ಲವನ್ನೂ ಪೂರೈಸಬೇಕು. ಇಂತಹ ಅಸಡ್ಡೆತನವನ್ನು ತಾವೆಂದೂ ಸಹಿಸುವುದೂ ಇಲ್ಲ.ಇಂತಹ ಬೇಜವಾಬ್ದಾರಿ ನಡವಳಿಕೆ ಸರಿಯೂ ಅಲ್ಲ ಎಂದು ತಾಕೀತು ಮಾಡಿದರು.

ಇದಕ್ಕೂ ಮುನ್ನ ಸಭೆಯಲ್ಲಿ ಮಾತನಾಡಿದ ಬಿ.ಸಿ.ಪಾಟೀಲ್, ಕೊರೋನಾ ಮಹಾಮಾರಿ ತೊಲಗಿಸಲು ಜನರ ರಕ್ಷಣೆಗೆ ಸರ್ಕಾರಿ ಖಾಸಗಿ ವೈದ್ಯರು ಎಂದು ಬೇಧಭಾವ ಮಾಡದೇ ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡಬೇಕು. ಕೋವಿಡ್19 ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಣೆ ನಿರ್ವಹಣೆ ಮಾಡಬೇಕು ಎಂದು ಹೇಳಿದರು .

ಇದೇ ವೇಳೆ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕುಗಳಲ್ಲಿ ವೈದ್ಯರ ಚೀಟಿ ಇಲ್ಲದೇ ಯಾವುದೇ ರೀತಿಯ ಔಷಧಿ ಮಾತ್ರೆಗಳನ್ನು ಔಷಧಿ ಅಂಗಡಿಯವರು ನೀಡಬಾರದು.

ಈ ಕುರಿತು ಬಿಗಿಯಾದ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರ್ ಹಾಗೂ ಸಿಪಿಐ ಅವರಿಗೆ ಸೂಚಿಸಿದರು. ಅಲ್ಲದೇ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕುಗಳಲ್ಲಿ ಮದುವೆಗಳಿಗೆ ಪರವಾನಗಿ ನೀಡಬಾರದು ಎಂದು ಆದೇಶಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ ಬಣಕಾರ್ ಹಾಗೂ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.

Tags: BC PatilCOVID-19haveri
ShareTweetSendShare
Join us on:

Related Posts

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

ಕಿವಿಯಲ್ಲಿ ದಾಸವಾಳ ಇಟ್ಟುಕೊಂಡಿದ್ದೀವಾ? ನಾಯಿಗಳ ಸಂಖ್ಯೆಗಿಂತ ಸಂತಾನಹರಣ ಚಿಕಿತ್ಸೆಯೇ ಹೆಚ್ಚು!: ಅಧಿಕಾರಿಗಳ ಬೆವರಿಳಿಸಿದ ಸಚಿವ ಕೃಷ್ಣಭೈರೇಗೌಡ- ಅಂಕಿಅಂಶಗಳ ಗೋಲ್ಮಾಲ್ ಕಂಡು ಸಚಿವರು ಗರಂ!

by Shwetha
July 1, 2026
0

ಬೆಂಗಳೂರು ನಗರದ ಅಭಿವೃದ್ಧಿ ಮತ್ತು ಸಾರ್ವಜನಿಕರ ತೆರಿಗೆ ಹಣದ ಸದುಪಯೋಗದ ಕುರಿತು ನಡೆದ ಜಿಬಿಎ ಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

ಜುಲೈ 1ರಿಂದ ವಾಣಿಜ್ಯ, ಕೈಗಾರಿಕಾ LPG ಸಿಲಿಂಡರ್ ದರ ಏರಿಕೆ

by Shwetha
July 1, 2026
0

ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಹಾಗೂ ಕೈಗಾರಿಕಾ ಬಳಕೆಯ LPG ಸಿಲಿಂಡರ್‌ಗಳ ದರವನ್ನು ಹೆಚ್ಚಿಸಲು ನಿರ್ಧರಿಸಿವೆ. ಹೊಸ ದರಗಳು ಜುಲೈ 1ರಿಂದ ಜಾರಿಗೆ ಬರಲಿವೆ. ಹೊಸ ಪರಿಷ್ಕರಣೆಯ...

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

ಓಡದಿದ್ದರೆ ಹಿಂದಕ್ಕೆ ಬೀಳ್ತೀರಿ, ಹೊಸ ನಾಯಕರು ಬರ್ತಾರೆ: ಸಿದ್ದರಾಮಯ್ಯ ಕಡೆಗಣನೆ ವಿಚಾರದಲ್ಲಿ ಸತೀಶ್ ಜಾರಕಿಹೊಳಿ ಮಾರ್ಮಿಕ ಮಾತು

by Shwetha
July 1, 2026
0

ರಾಜಕಾರಣ ಎಂಬುದು ನಿಂತ ನೀರಲ್ಲ, ಅದು ನಿರಂತರವಾಗಿ ಓಡುವ ರೇಸ್ ಎನ್ನುವ ಸತ್ಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅತ್ಯಂತ ನೇರ ನುಡಿಗಳಲ್ಲಿ ಬಿಚ್ಚಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ...

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

ಆಡಿಯೋ ವಿವಾದಕ್ಕೆ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ; ಅದು ನನ್ನದಲ್ಲ

by Shwetha
July 1, 2026
0

ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿರುವ ವೈರಲ್ ಆಡಿಯೋ ವಿವಾದದ ಕುರಿತು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

ಸಿದ್ದರಾಮಯ್ಯ ಹಾದಿ ನನಗಲ್ಲ ನನ್ನ ಸ್ಟೈಲೇ ಬೇರೆ: ದೆಹಲಿ ನಾಯಕರ ಜೊತೆ ಡಿಕೆಶಿ ದೋಸ್ತಿ ಪಾಲಿಟಿಕ್ಸ್

by Shwetha
July 1, 2026
0

ಕರ್ನಾಟಕ ರಾಜಕಾರಣದ ಇಬ್ಬರು ಧ್ರುವತಾರೆಗಳಾದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯವೈಖರಿಯಲ್ಲಿ ಈಗ ದೊಡ್ಡ ಬದಲಾವಣೆ ಕಂಡುಬರುತ್ತಿದೆ. ವಿಶೇಷವಾಗಿ ಕೇಂದ್ರ ಸರ್ಕಾರದೊಂದಿಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram