ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ – ಮೂವರ ಬಂಧನ
ರಾಜಸ್ಥಾನ : ರಾಜಸ್ಥಾನದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಬಾವಿಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಬಂಧಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ. 16 ವರ್ಷದ ಬಾಲಕಿಯ ಮೇಲೆ ಮೂವರು ಕಾಮುಕರು ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನ ಬಾವಿಗೆ ತಳ್ಳಲಾಗಿದೆ.
ಅಧಿಕಾರಿಯೊಬ್ಬರು ಪ್ರಕರಣದ ತನಿಖೆ ನಡೆಸುತ್ತಿದ್ದು ಈ ಸಂಬಂಧ ಸೋಮವಾರ ಸಂತ್ರಸ್ತೆಯ ತಂದೆಯ ಹೇಳಿಕೆ ದಾಖಲಿಸಿಕೊಂಡಿದ್ದರು. ಆದರೆ, ಇದಾದ ಬಳಿಕ ತನ್ನ ಹೇಳಿಕೆ ಬದಲಿಸಿರುವ ಬಾಲಕಿಯ ತಂದೆ ಯಾರನ್ನೂ ಆರೋಪಿಗಳು ಎಂದು ಹೆಸರಿಸಿಲ್ಲ. ಇದು ಅತ್ಯಾಚಾರ ಪ್ರಕರಣವಲ್ಲ. ಸಹೋದರಿಯೊಂದಿಗೆ ಜಗಳವಾಡಿದ ಬಳಿಕ ಬಾವಿಗೆ ಹೋಗಿ ಬಿದ್ದಿದ್ದಾಳೆ ಎಂದು ಹೇಳಿಕೆ ನೀಡಿರುವುದಾಗಿ ವರದಿಯಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








