ಭಾರತ ಸರ್ಕಾರದೊಂದಿಗೆ ಕೋವಿಡ್ ಲಸಿಕೆ ಪೂರೈಕೆ ವಿಚಾರವಾಗಿ ಫೈಜರ್ ಸಂಸ್ಥೆ ಚರ್ಚೆ
ನವದೆಹಲಿ : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಜೊತೆಗೆ ಲಸಿಕೆ ಕೊರತೆಯ ಸಮಸ್ಯೆಯನ್ನೂ ಸಹ ದೇಶ ಎದುರಿಸುತ್ತಿದೆ.. ಈ ನಡುವೆ ಫೈಜರ್ ಸಂಸ್ಥೆಯು ತನ್ನ ಕೋವಿಡ್ ಲಸಿಕೆಯ ಪೂರೈಕೆ ಕುರಿತಾಗಿ ಭಾರತ ಸರ್ಕಾರದೊಂದಿಗೆ ಚರ್ಚೆ ನಡೆಸುತ್ತಿದೆ ಎಂದು ಫೈಜರ್ ಹೇಳಿಕೆ ಬಿಡುಗಡೆ ಮಾಡಿದೆ.
ಕೋವಿಡ್ 2ನೇ ಅಲೆಯಿಂದಾಗಿ ಅನೇಕ ಮಕ್ಕಳು ತಂದೆ ತಾಯಿಯನ್ನ ಕಳೆದುಕೊಂಡು ಅನಾಥರಾಗಿದ್ರೆ , ಇನ್ನೂ ಹಲವರು ಕುಟುಂಬಸ್ಥರು , ಆಪ್ತರು , ಸ್ನೇಹಿತರನ್ನ ಕಳೆದುಕೊಂಡಿದ್ದಾರೆ.. ಮತ್ತು ಹಲವು ಕುಟುಂಬಗಳ ಆಧಾರಸ್ಥಂಬವೆನಿಸಿಕೊಂಡಿದ್ದರು ಕೊರೊನಾಗೆ ಬಲಿಯಾಗಿದ್ದು, ಕುಟುಂಬಗಳು ದಿಚ್ಚು ತೋಚದ ಪರಿಸ್ಥಿತಿಗೆ ತಲುಪಿವೆ.. ಸಿನಿಮಾ ತಾರೆಯರು ಮೃತಪಟ್ಟಿದ್ದಾರೆ. ಸೆಲೆಬ್ರಿಟಿಗಳು ಸಹ ತಮ್ಮವರನ್ನ ಕಳೆದುಕೊಂಡಿದ್ದಾರೆ.. ಇನ್ನೂ ವಿಪರ್ಯಾಸವೆಂದ್ರೆ ಮದುವೆಗೆ ಇನ್ನು ಒಂದೆರೆಡು ದಿನಗಳಿರುವಾಗಲೇ ವರ ಅಥವ ವಧು ಮೃತಪಟ್ಟಿರುವ ಘಟನೆಗಳು , ಮದುವೆಯಾದ ವಾರ -10 ದಿನಗಳೊಳಗೇ ಗಂಡ ಅಥವ ಹೆಂಡತಿ ಸಾವನಪ್ಪಿರುವುದು ಇಂತಹ ಮನಕಲುಕುವಂತಹ ಘಟನೆಗಳು ಬೆಳಕಿಗೆ ಬರುತ್ತಿವೆ..
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








