‘ಯಾಸ್’ ಚಂಡಮಾರುತ : ರಾಜ್ಯದ 7 ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್
ಇತ್ತೀಚೆಗಷ್ಟೇ ದೇಶ ಹಾಗೂ ರಾಜ್ಯದ ಮಲೆನಾಡು , ಕರಾವಳಿ ಭಾಗಗಳಿಗೆ ‘ತೌಕ್ತೇ’ ಚಂಡಮಾರುತ ಅಪ್ಪಳಿಸಿ ಅವಾಂತರ ಸೃಷ್ಟಿ ಮಾಡಿತ್ತು.. ಇದರ ಬೆನ್ನಲ್ಲೇ ಇದೀಗ ‘ಯಾಸ್’ ಚಂಡಮಾರುತದ ಕಂಟಕ ಎದುರಾಗಿದೆ..
ಯಾಸ್ ಚಂಡಮಾರುತದ ಪರಿಣಾಮ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮೇ 26ರಂದು ಗುಡುಗು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶಿಸುವ ಸೂಚನೆ ಇದೆ. ಈ ವಾರದಲ್ಲಿ ಪೂರ್ವ ಮುಂಗಾರು ಮಳೆ ಸುರಿಯಬಹುದು. ಸದ್ಯ ಚಂಡಮಾರುತದ ಕಾರಣ ಕೆಲ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದೆ.
ಇನ್ನೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಹೀಗಾಗಿ ರಾಜ್ಯದ 7 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ಕರಾವಳಿಯಲ್ಲಿ ಮೇ 29 ಮತ್ತು 30ರಂದು ಭಾರಿ ಮಳೆಯಾಗಲಿದೆ. ಒಳನಾಡಿನಲ್ಲೂ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಬಹುದು ಹವಾಮಾನ ಇಲಾಖೆ ತಿಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.







