ಮೋದಿಯ ವೈಯಕ್ತಿಕ ಪ್ರಚಾರಕ್ಕಾಗಿ ಕೋವಿಡ್ ಲಸಿಕೆಯ ಬಳಕೆ : ಪ್ರಿಯಾಂಕಾ ಗಾಂಧಿ
ಕೋವಿಡ್ ನಿಯಂತ್ರಣದಲ್ಲಿ ಸರ್ಕಾರದ ಕಾರ್ಯ ವೈಖರಿಯ ಬಗ್ಗೆ ಪ್ರಶ್ನೆ ಎತ್ತುತ್ತಲೇ ಇದೆ ಕಾಂಗ್ರೆಸ್.. ರಾಹುಲ್ ಗಾಂಧಿ ಸಹ ಆಗಾಗ ಟ್ವೀಟ್ ಮೂಲಕ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಇರುತ್ತಾರೆ.. ಇದೀಗ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಸಹ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಭಾರತದಲ್ಲಿ ಕೋವಿಡ್ ಲಸಿಕೆಯನ್ನು ಜನರ ಜೀವ ಉಳಿಸುವ ಸಾಧನವನ್ನಾಗಿ ಬಳಸುವ ಬದಲು ಪ್ರಧಾನಿ ಮೋದಿ ಅವರ ವೈಯಕ್ತಿಕ ಪ್ರಚಾರಕ್ಕಾಗಿ ಬಳಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಸೌತ್ ಸಿನಿಮಾರಂಗದ ಶ್ರೀಮಂತ ನಟಿ ಯಾರು..? ಒಟ್ಟಾರೆ ಆಸ್ತಿ ಎಷ್ಟು ಗೊತ್ತಾ…?
‘ಜಿಮೆದಾರ್ ಕೌನ್..? ’ (ಯಾರು ಹೊಣೆಗಾರರು) ಅಭಿಯಾನದಡಿ ಮಾತನಾಡಿದ ಪ್ರಿಯಾಂಕಾ ವಾದ್ರಾ, ‘ವಿಶ್ವದ ಅತಿದೊಡ್ಡ ಲಸಿಕೆ ತಯಾರಕ ದೇಶ ಭಾರತವು, ಈಗ ಲಸಿಕೆಗಾಗಿ ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಕೇಂದ್ರ ಸರ್ಕಾರವು ಇದನ್ನು ದೊಡ್ಡ ಸಾಧನೆ ಎಂಬ ರೀತಿಯಲ್ಲಿ ತೋರಿಸಲು ಪ್ರಯತ್ನಿಸುತ್ತಿದೆ’ ಎಂದು ಟೀಕಿಸಿದ್ದಾರೆ.
ಕೇಂದ್ರ ಸರ್ಕಾರವು ಲಸಿಕೆ ಅಭಿಯಾನದ ಸಂಪೂರ್ಣ ಹೊಣೆಯನ್ನು ರಾಜ್ಯಗಳ ಮೇಲೆ ಹೇರಿದೆ. ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಅವರ ಫೋಟೊವೊಂದನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಜವಾಬ್ದಾರಿಯು ರಾಜ್ಯಗಳ ಮೇಲಿದೆ. ರಾಜ್ಯಗಳಲ್ಲಿ ಲಸಿಕೆಯ ಅಭಾವವಿದೆ. ಈ ಪರಿಸ್ಥಿತಿಗೆ ಯಾರು ಹೊಣೆ, ಎಂದು ಅವರು ಪ್ರಶ್ನಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.