ಕೋವಿಡ್ ಸಂಕಷ್ಟ – ಉಚಿತವಾಗಿ ಆಮ್ಲಜನಕ ಪೂರೈಕೆಗೆ ಮುಂದಾದ ರಾಮ್ ಚರಣ್
ಮೆಗಾಸ್ಟಾರ್ ಚಿರಂಜೀವಿ ಅವರು ಸದಾ ಸಮಾಜಮುಖಿ ಕಾರ್ಯಗಳನ್ನ ಮಾಡುತ್ತಾ ಬಂದಿದ್ದಾರೆ.. ಅವರ ಪುತ್ರ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಸಹ ಅವರದ್ದೇ ಮಾರ್ಗದಲ್ಲಿ ನಡೆದಿದ್ದಾರೆ.. ಹೌದು ಆಂಧ್ರ ಪ್ರದೇಶದ ಹಲವು ಜಿಲ್ಲೆಗಳಿಗೆ ಆಮ್ಲಜನಕ ಸಿಲಿಂಡರ್ಗಳನ್ನು ಉಚಿತವಾಗಿ ಸರಬರಾಜು ಮಾಡುವ ಕಾರ್ಯವನ್ನು ನಟ ಚಿರಂಜೀವಿ ಹಾಗೂ ರಾಮ್ ಚರಣ್ ತೇಜ ಇಬ್ಬರು ಒಟ್ಟಾಗಿ ಮಾಡುತ್ತಿದ್ದಾರೆ. ಚಿರಂಜೀವಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಮ್ಲಜನಕ ಬ್ಯಾಂಕ್ ಸ್ಥಾಪಿಸಿದ್ದು ಈ ಆಮ್ಲಜನಕ ಬ್ಯಾಂಕ್ಗಳು ಮೇ 26 ರಿಂದ ಕಾರ್ಯಾರಂಭ ಮಾಡಿವೆ.
ಇನ್ನೂ ಕೊರೊನಾ ಸಂಕಷ್ಟದ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ನೂರಾರು ಆಮ್ಲಜನಕ ಸಿಲಿಂಡರ್ಗಳು ಹಾಗೂ ಆಮ್ಲಜನಕ ಸಾಂದ್ರಕ ಯಂತ್ರಗಳನ್ನು ಖರೀದಿಸಿರುವ ಚಿರಂಜೀವಿ ಮತ್ತು ರಾಮ್ ಚರಣ್ ಮೊದಲ ಬ್ಯಾಚ್ ಅನ್ನು ಅನಂತಪುರ ಜಿಲ್ಲೆ ಹಾಗೂ ಗುಂಟೂರಿಗೆ ಕಳುಹಿಸಿದ್ದಾರೆ. ಈ ಕುರಿತ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ತಂದೆ ಮಗನ ಸಮಾಜಮುಖಿ ಕಾರ್ಯಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.