ಮೇ 29ರಿಂದ ಜೂನ್ 7ರ ವರೆಗೆ ಮೈಸೂರಲ್ಲಿ ಕಂಪ್ಲೀಟ್ ಲಾಕ್ ಡೌನ್
ಮೈಸೂರು : ಜಿಲ್ಲೆಯಲ್ಲಿ ಕೊರೊನಾ ವೈರಸ್ ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇ 29 ರಿಂದ ಜೂನ್ 7 ರವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಾಗಲಿದ್ದು, ಕೇವಲ ಎರಡು ದಿನ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿಲಾಗಿದೆ.
ಲಾಕ್ ಡೌನ್ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದು, ಸೋಮವಾರ ಮತ್ತು ಗುರುವಾರ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ, ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರಲಿದೆ.
ಈ ಆದೇಶ ಮೇ 29ರಿಂದ ಜೂನ್ 7ರ ಬೆಳಗ್ಗೆ 6 ಗಂಟೆಯವರೆಗೆ ಜಾರಿಯಲ್ಲಿರಲಿದೆ. ಸೋಮವಾರ ಮತ್ತು ಗುರುವಾರ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ತರಕಾರಿ, ದಿನಸಿ ಖರೀದಿಗೆ ಅವಕಾಶವಿದೆ.
ನಿಷೇಧಾಜ್ಞೆ ಅವಧಿಯಲ್ಲಿ ಸರಕು ಸಾಗಣೆ ವಾಹನಗಳಿಗೆ ಮಾತ್ರ ಅವಕಾಶವಿದ್ದು, ಬೇರೆ ಎಲ್ಲಾ ವಾಹನ ಸಂಚಾರ, ಜನರ ಓಡಾಟಕ್ಕೆ ನಿಬರ್ಂಧವಿದೆ. ನಿಯಮ ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶದಲ್ಲಿ ತಿಳಿಸಿದ್ದಾರೆ.









