ನಾನು 2023ರ ಚುನಾವಣೆಯಲ್ಲಿ ಸ್ಪರ್ಧಿಸ್ತೀನಿ.. ಆದ್ರೆ : ಸಿದ್ದರಾಮಯ್ಯ
ಬೆಂಗಳೂರು : ಸದ್ಯ ಉತ್ತರ ಕರ್ನಾಟಕದ ಬಾದಾಮಿ ಶಾಸಕರಾಗಿರುವ ಸಿದ್ದರಾಮಯ್ಯ, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ..? ಸ್ಪರ್ಧಿಸಿದ್ರೆ ಯಾವ ಕ್ಷೇತ್ರದಿಂದ ಕಣಕ್ಕೆ ಇಳಿಯುತ್ತಾರೆ..? ಅನ್ನೋ ಪ್ರಶ್ನೆಗಳು ರಾಜ್ಯದ ಜನರಲ್ಲಿ ಕಾಡುತ್ತಲೇ ಇವೆ.
ಈ ಬಗ್ಗೆ ಸಿದ್ದರಾಮಯ್ಯ ಇದೀಗ ಸ್ಪಷ್ಟನೆ ನೀಡಿದ್ದು, 2023ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ, ಆದರೆ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂಬುದು ಇನ್ನೂ ನಿರ್ಧರಿಸಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಉತ್ತರ ಕರ್ನಾಟಕದ ಬಾದಾಮಿಯ ಶಾಸಕರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ತಮ್ಮ ತವರು ಜಿಲ್ಲೆ ಮೈಸೂರು ಅಥವಾ ಬೆಂಗಳೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ಮಧ್ಯೆ ಸಿದ್ದರಾಮಯ್ಯ ಆಪ್ತ ಶಾಸಕ ಜಮೀರ್ ಅಹಮದ್ ತಮ್ಮ ಕ್ಷೇತ್ರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಿಗೆ ಬಿಟ್ಟುಕೊಡಲು ಮುಂದಾಗಿದ್ದಾರೆ.
ಈ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸದ್ಯ ನಾನು ಬಾದಾಮಿ ಕ್ಷೇತ್ರದ ಶಾಸಕ. ಚುನಾವಣೆಗೆ ಇನ್ನೂ ಎರಡು ವರ್ಷ ಇದೆ.
ಚಾಮರಾಜಪೇಟೆಯಿಂದ ಸ್ಪರ್ಧಿಸಲಿದ್ದೇನೆ ಎಂದು ನಾನೂ ಎಲ್ಲಿಯೂ ಹೇಳಿಲ್ಲ. ಆದರೆ, ಚಾಮರಾಜಪೇಟೆ ಸ್ಪರ್ಧಿಸುವಂತೆ ಕ್ಷೇತ್ರದ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳುತ್ತಿದ್ದಾರೆ’ ಎಂದರು.










