ಮೇಕೆದಾಟು ಬಳಿ ಡ್ಯಾಂ ನಿರ್ಮಾಣ ಮಾಡಲು ಬಿಡಲ್ಲ : ತಮಿಳುನಾಡಿನ ಸಚಿವ ದೊರೈ ಮುರುಗನ್
ತಮಿಳುನಾಡು : ಮೇಕೆದಾಟು ಬಳಿ ಕಾವೇರಿ ನದಿಗೆ ಅಡ್ಡವಾಗಿ ಡ್ಯಾಂ ನಿರ್ಮಾಣ ಮಾಡು ಬಿಡುವುದಿಲ್ಲ ಎಂದು ನೂತನ ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಹೇಳಿದ್ದಾರೆ. ಅಲ್ಲದೇ ಈ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಸವಾಲು ಹಾಕಿದ್ದಾರೆ.
ಮೇಕೆದಾಟು ಯೋಜನೆ ಬಗ್ಗೆ ಇತ್ತೀಚೆಗೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸಮಿತಿ ರಚಿಸಿದೆ. ಇದಾದ ಬೆನ್ನಲ್ಲೇ ಸುಪ್ರಿಂಕೋರ್ಟ್ ನಲ್ಲಿ ಬಾಕಿ ಉಳಿದಿರುವ ತಮಿಳುನಾಡು ಮನವಿ ಅರ್ಜಿಗಳ ಬಗ್ಗೆ ಮಾತನಾಡಿರುವ ದೊರೈ ಮುರುಗನ್, ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಚಾರದ ಬಗ್ಗೆ ಕಾನೂನು ಹೋರಾಟ ಮಾಡುತ್ತೇವೆ. ಕಾನೂನು ತಜ್ಞರೊಂದಿಗೆ ಸಮಾಲೋಚಿಸಿ ಸೂಕ್ತ ಕ್ರಮಕ್ಕೆ ಮುಂದಾಗುತ್ತೇವೆ ಎಂದಿದ್ದಾರೆ. 
ಮೇಕೆದಾಟಿನಲ್ಲಿ ಅನಧೀಕೃತ ನಿರ್ಮಾಣ ಚಟುವಟಿಕೆಗಳು ನಡೆಯುತ್ತಿವೆ ಎಂಬ ವರದಿಯನ್ನು ಗಂಭೀರವಾಗಿ ತೆಗೆದುಕೊಂಡಿರುವ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ದಕ್ಷಿಣ ವಲಯ, ಈ ಆರೋಪಗಳ ಬಗ್ಗೆ ಪರಿಶೀಲಿಸಲು ಜಂಟಿ ಸಮಿತಿ ರಚಿಸಿದ ಬೆನ್ನಲ್ಲೇ ದೊರೈಮುರುಗನ್ ಈ ಹೇಳಿಕೆ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








