‘ಟೋಲ್‍ಗಳಲ್ಲಿ ವೇಟಿಂಗ್ ಸಮಯ10 ಸೆಕೆಂಡ್ ಗಳನ್ನ ಮೀರಬಾರದು’..!
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಪ್ಲಾಜಾಗಳಲ್ಲಿ ವಾಹನದಟ್ಟಣೆಯ ಸಮಯ ಸೇರಿ ಎಲ್ಲ ಸಮಯದಲ್ಲೂ ಪ್ರತಿ ವಾಹನದ ಟೋಲ್ ಶುಲ್ಕ ಪಾವತಿ ಸಮಯ 10 ಸೆಕೆಂಡ್ ಮೀರದಿರುವುದನ್ನು ಖಾತರಿಪಡಿಸಬೇಕು ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿರುವ ಪ್ರಾಧಿಕಾರ, ಟೋಲ್ ಶುಲ್ಕ ಪಾವತಿ ಸಮಯ 10 ಸೆಕೆಂಡ್ ಮೀರುವಂತಿಲ್ಲ. ಅಲ್ಲದೆ ಟೋಲ್ ಪ್ಲಾಜಾಗಳಲ್ಲಿ 100 ಮೀಟರ್ ಗಿಂತ ಹೆಚ್ಚು ವಾಹನಗಳ ಸರದಿ ನಿಲ್ಲಲು ಅವಕಾಶವಿಲ್ಲ. ಒಂದು ವೇಳೆ ಯಾವುದಾದರು ಕಾರಣಕ್ಕೆ ಕಾಯುತ್ತಿರುವ ವಾಹನಗಳ ಸರದಿ 100 ಮೀಟರ್ ಗಿಂತ ಹೆಚ್ಚಾದರೆ ಟೋಲ್ ಬೂತ್ ಗಳಲ್ಲಿ ವಾಹನಗಳ ಸರದಿ 100 ಮೀಟರ್ ಒಳಗಿನ ವಾಹನಗಳು ಟೋಲ್ ಪಾವತಿಸದೆ ಸಂಚರಿಸಬಹುದು.
ಟೋಲ್ ಬೂತ್ ನಲ್ಲಿ ಪ್ರತಿಯೊಂದು ಟೋಲ್ ಮಾರ್ಗದಲ್ಲಿ 100 ಮೀಟರ್ ದೂರದಲ್ಲಿ ಹಳದಿ ಪಟ್ಟಿ ಹಾಕಲಾಗುತ್ತದೆ. ಒಂದು ವೇಳೆ 100 ಮೀಟರ್‍ಗೂ ಅಧಿಕ ಸರದಿ ನಿಂತರೆ ಈ ಹಳದಿ ಪಟ್ಟಿ ಒಳಗಿನ ವಾಹನಗಳು ಟೋಲ್ ಪಾವತಿಸದೇ ಉಚಿತವಾಗಿ ಸಂಚರಿಸಬಹುದಾಗಿದೆ. ಇದು ಫಾಸ್ಟ್ಯಾಗ್ ಅಳವಡಿಸಿಕೊಂಡ ವಾಹನಗಳಿಗೆ ಮಾತ್ರ ಅನ್ವಯವಾಗಲಿದೆ. ಫಾಸ್ಟ್ಯಾಗ್ ಅಳವಡಿಸದ ವಾಹನಗಳಿಗೆ ವೇಟಿಂಗ್ ಪಿರಿಯಡ್ ನಿಯಮ ಅನ್ವಯವಾಗುವುದಿಲ್ಲ ಎಂದು NHI ಸ್ಪಷ್ಟಪಡಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








