ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ – ಕ್ವಾರಂಟೈನ್ ನಲ್ಲಿ ಟೀಮ್ ಇಂಡಿಯಾ ಆಟಗಾರರು..!
ಟೀಮ್ ಇಂಡಿಯಾ ಈಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನ ಫೈನಲ್ ಪಂದ್ಯಕ್ಕೆ ರೆಡಿಯಾಗುತ್ತಿದೆ. ಜೂನ್ 18ರಿಂದ ಇಂಗ್ಲೆಂಡ್ ನ ಸೌತಾಂಪ್ಟನ್ ನಲ್ಲಿ ಫೈನಲ್ ಪಂದ್ಯ ನಡೆಯಲಿದೆ. ನಿರ್ಣಾಯಕ ಪಂದ್ಯದಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಲಿವೆ.
ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಕ್ವಾರಂಟೈನ್ ನಲ್ಲಿದ್ದಾರೆ. ಅಲ್ಲದೆ ಜೈವಿಕ ಸುರಕ್ಷತೆಯಡಿಯಲ್ಲಿ ಅಭ್ಯಾಸ ಕೂಡ ನಡೆಸುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರರು ಜಿಮ್ ನಲ್ಲೂ ಕಸರತ್ತು ನಡೆಸುತ್ತಿದ್ದಾರೆ.
ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಮೊದಲ ಕೋವಿಡ್ ಲಸಿಕೆ ಪಡೆದುಕೊಂಡಿದ್ದಾರೆ. ಜೊತೆಗೆ ಮೇ 19ರ ಮೊದಲು ಮೂರು ಬಾರಿ ಆರ್ ಟಿ ಪಿ ಸಿ ಆರ್ ಟೆಸ್ಟ್ ಮಾಡಿಕೊಂಡಿದ್ದಾರೆ. ಆರ್ ಟಿಪಿಸಿಆರ್ ಟೆಸ್ಟ್ ನನಲ್ಲಿ ನೆಗೆಟಿವ್ ಬಂದ ಮೇಲೆ ಆಟಗಾರರನ್ನು ಕ್ವಾರೈಂಟನ್ ನಲ್ಲಿಡಲಾಗಿದೆ.
ಮುಂಬೈ ನಲ್ಲಿ ಹತ್ತು ದಿನಗಳ ಕ್ವಾರೈಂಟೆನ್ ಆದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಗೆ ಪ್ರಯಾಣ ಬೆಳೆಸಲಿದೆ. ಬಳಿಕ ಇಂಗ್ಲೆಂಡ್ ನಲ್ಲಿ ಹತ್ತು ದಿನಗಳ ಕ್ವಾರೈಂಟೆನ್ ನಂತ್ರ ಆಟಗಾರರು ಜೈವಿಕ ಸುರಕ್ಷತೆಯಡಿಗೆ ಒಳಪಡಲಿದ್ದಾರೆ.
ಹಾಗೇ ಟೀಮ್ ಇಂಡಿಯಾ ಆಟಗಾರರು ತಮ್ಮ ಎರಡನೇ ಕೋವಿಡ್ ಲಸಿಕೆಯನ್ನು ಇಂಗ್ಲೆಂಡ್ ನಲ್ಲಿ ಪಡೆದುಕೊಳ್ಳಲಿದ್ದಾರೆ. ಈ ಬಗ್ಗೆ ಈಗಾಗಲೇ ಬಿಸಿಸಿಐ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯ ಜೊತೆಗೆ ಚರ್ಚೆ ಕೂಡ ಮಾಡಿದೆ.
ಒಟ್ಟಾರೆ, ಕೋವಿಡ್ ಮಹಾಮಾರಿಯ ನಡುವೆಯೇ ಇಂಗ್ಲೆಂಡ್ ನಲ್ಲಿ ವಿಶ್ವದ ಎರಡು ಬಲಿಷ್ಠ ತಂಡಗಳಾದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರತಿಷ್ಠಿತ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ.








