ರಾಮಮೂರ್ತಿನಗರ ಗ್ಯಾಂಗ್ ರೇಪ್ ಕೇಸ್ : ಬೆಂಗಳೂರು ಪೋಲಿಸರು ಒಳ್ಳೆ ಕೆಲಸ ಮಾಡಿದ್ದಾರೆ – ಬೊಮ್ಮಾಯಿ
ರಾಮಮೂರ್ತಿನಗರ ಗ್ಯಾಂಗ್ ರೇಪ್ ಕೇಸ್ ಸಂಬಂಧ ಗೃಹ ಸಚಿವ ಬಸವರಾಜಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದ ಆರೋಪಿಗಳು ಇನ್ನೂ ಕೆಲವರು ಕೇರಳದಲ್ಲಿ ಇದ್ದಾರೆ ಅನ್ನೋ ಮಾಹಿತಿ ಇದೆ. ಉಳಿದವರನ್ನು ರಾಮಮೂರ್ತಿ ನಗರ ಪೋಲಿಸರು ಅರೆಸ್ಟ್ ಮಾಡಿ ಜೈಲಿನಲ್ಲಿಟ್ಟಿದ್ದಾರೆ. ಬೆಂಗಳೂರು ಪೋಲಿಸರು ಒಳ್ಳೆ ಕೆಲಸ ಮಾಡಿದ್ದಾರೆ. ಈ ಪ್ರಕರಣ ದೇಶದಲ್ಲಿ ನಡೆದಿದ್ದು ಅಂತ ಗೊತ್ತಿರಲಿಲ್ಲ. ವಿಡಿಯೋ ಟ್ರೇಸ್ ಔಟ್ ಮಾಡಿದ ಬಳಿಕ ಬೆಂಗಳೂರಿನಲ್ಲಿ ನಡೆದಿದ್ದು ಗೊತ್ತಾಗಿದೆ. ರಾಮಮೂರ್ತಿ ನಗರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದು ಬೆಳಕಿಗೆ ಬಂದಿದೆ . ಪೋಲಿಸ್ ಕಮಿಷನರೇ ಈ ಪ್ರಕರಣದ ಜಾಲ ಪತ್ತೆ ಹಚ್ಚಲು ನೇತೃತ್ವ ವಹಿಸಿದ್ದು ಶೀಘ್ರವೇ ಎಲ್ಲಾ ಆರೋಪಿಗಳ ಬಂಧನವಾಗಲಿದೆ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








