ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ನಡೆಯಬೇಕಿದ್ದ ಭೂಮಿಪೂಜೆ ಕಾರ್ಯಕ್ರಮವನ್ನು ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಈ ಹಿಂದೆ ಸಭೆ ಸೇರಿದ್ದ ಸಾಧು-ಸಂತರು ಏಪ್ರಿಲ್ 30 ರಂದು ಭೂಮಿ ಪೂಜೆ ಮಾಡಲು ತೀರ್ಮಾನ ಮಾಡಿದ್ದರು. ಏಪ್ರಿಲ್ 30 ರಂದು ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣ ಕಾಮಗಾರಿ ಆರಂಭಿಸಲು ಉದ್ದೇಶಿಸಿ ಭೂಮಿಪೂಜೆ ಕಾರ್ಯಕ್ರಮವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿತ್ತು. ಆದರೆ ಕೊರೊನಾ ನಿಯಂತ್ರಣಕ್ಕಾಗಿ ದೇಶವನ್ನು ಲಾಕ್ ಡೌನ್ ಮಾಡಲಾಗಿದೆ. ಇದರಿಂದ ಭೂಮಿ ಪೂಜೆ ಮಾಡಲು ಆಗುವುದಿಲ್ಲ. ಹಾಗಾಗಿ ಭೂಮಿ ಪೂಜೆಯನ್ನು ಮುಂದೂಡಲಾಗಿದೆ ಎಂದು ರಾಮ ಮಂದಿರ ನಿರ್ಮಾಣಕ್ಕಾಗಿ ರಚಿಸಲಾಗಿರುವ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ತನ್ನ ನಿರ್ಧಾರ ಪ್ರಕಟಿಸಿದೆ. ಅಲ್ಲದೆ ಭೂಮಿ ಪೂಜೆಯ ದಿನಾಂಕವನ್ನು ಕೊರೊನಾ ಮಹಾಮಾರಿಯಿಂದ ದೇಶ ಪರಾಗಿ, ದೇಶ ಸಹಜ ಸ್ಥಿತಿ ಬಂದ ಬಳಿಕ ನಿಗದಿ ಮಾಡಲಾಗುವುದು . ‘ಪಿಎಂ ಕೇರ್ಸ್’ ಗೆ 11 ಲಕ್ಷ ದೇಣಿಗೆ ನೀಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹೇಳಿದೆ.
ಬಿಬಿಎಂಪಿ ಅಧಿಕಾರಿಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಸಜ್ಜಾದ ಸಚಿವ ಕೃಷ್ಣ ಬೈರೇಗೌಡ :ತೇಪೆ ಹಚ್ಚಿದ ರಸ್ತೆಗೆ ‘ಮೊದಲ ವಿಕೆಟ್’ ಪತನ
ಸಿಲಿಕಾನ್ ಸಿಟಿ ಬೆಂಗಳೂರು ಇಂದು ರಸ್ತೆ ಗುಂಡಿಗಳ ನಗರ ಎಂಬ ಕುಖ್ಯಾತಿ ಪಡೆದಿದೆ. ದೇಶ ವಿದೇಶಗಳಿಂದ ಹೂಡಿಕೆದಾರರನ್ನು ಸೆಳೆಯುವ ಈ ಮಹಾನಗರದಲ್ಲಿ ಸವಾರರು ಪ್ರತಿ ನಿತ್ಯ ಪ್ರಾಣವನ್ನು...








