ಬೇಡಿಕೆ ಕಡಿಮೆ ಇದ್ದರೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ Petrol
ನವದೆಹಲಿ : ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೇಶದ ಬಹುತೇಕ ರಾಜ್ಯಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದೆ.
ಇದರಿಂದಾಗಿ ಜನರು ವಾಹನಗಳನ್ನು ಬಳಸುವುದು ಕಡಿಮೆಯಾಗಿದ್ದು, ಪೆಟ್ರೋಲ್, ಡೀಸೆಲ್ ಬೇಡಿಕೆ ಕೂಡ ಕಡಿಮೆಯಾಗಿದೆ.
ಆದರೆ ದೇಶದಲ್ಲಿ ಪ್ರತಿದಿನ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗುತ್ತಲೇ ಇದೆ.
ಇಂದು ದೇಶದಾದ್ಯಂತ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಿದೆ.
ಸರ್ಕಾರಿ ಸ್ವಾಮ್ಯದ ಚಿಲ್ಲರೆ ತೈಲ ಮಾರಾಟಗಾರರ ಅಧಿಸೂಚನೆ ಪ್ರಕಾರ ಪೆಟ್ರೋಲ್ ಬೆಲೆ ಲೀಟರ್‍ಗೆ 26 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್‍ಗೆ 25 ಪೈಸದಷ್ಟು ಏರಿಕೆಯಾಗಿದೆ.
ಇದರೊಂದಿಗೆ ದೆಹಲಿಯಲ್ಲಿ ಪೆಟ್ರೊಲ್ ಬೆಲೆ ಲೀಟರ್‍ಗೆ 94.49, ಡೀಸೆಲ್ ಬೆಲೆ ಲೀಟರ್‍ಗೆ 85.38ರಷ್ಟಾಗಿದೆ.
ರಾಜಸ್ಥಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರದ ಹಲವಾರು ನಗರಗಳಲ್ಲಿ ಈಗಾಗಲೇ ಪೆಟ್ರೋಲ್ ಬೆಲೆ ಲೀಟರ್‍ಗೆ 100 ದಾಟಿದೆ. ಡೀಸೆಲ್ ಪ್ರತಿ ಲೀಟರ್‍ಗೆ 92.69 ರಷ್ಟಾಗಿದೆ.