ಕೊರೊನಾ ತವರು ಚೀನಾದಲ್ಲಿ ವ್ಯಕ್ತಿಯೊಬ್ಬರಲ್ಲಿ H10N3 ಹಕ್ಕಿ ಜ್ವರ ಪತ್ತೆ.. ಈ ತಳಿಯ ಸೋಂಕಿಗೆ ಒಳಪಟ್ಟ ಮೊದಲ ಮಾನವ
ಇಡೀ ವಿಶ್ವಕ್ಕೆ ಕೊರೊನಾ ವೈರಸ್ ಹಬ್ಬಿಸಿರುವ ಚೀನಾದದಲ್ಲಿ ವ್ಯಕ್ತಿಯೊಬ್ಬರಲ್ಲಿ H10N3 ಹಕ್ಕಿ ಜ್ವರ ಪತ್ತೆಯಾಗಿದೆ. ಪಶ್ಚಿಮ ಪ್ರಾಂತ್ಯದ ಜಿಯಾಂಗ್ಸುನ 41 ವರ್ಷದ ವ್ಯಕ್ತಿಯೊಬ್ಬರಲ್ಲಿ H10N3 ತಳಿಯ ಹಕ್ಕಿ ಜ್ವರ ಪತ್ತೆಯಾಗಿದೆ.
ಇನ್ನೂ ಈ ತಳಿಯಿಂದ ಸೋಂಕಿಗೆ ಒಳಪಟ್ಟ ಮೊದಲ ಮಾನವ ಪ್ರಕರಣ ಇದಾಗಿದೆ ಎಂದು ಚೀನಾದ ರಾಷ್ಟ್ರೀಯ ಆರೋಗ್ಯ ಆಯೋಗ ತಿಳಿಸಿದೆ. ಜೆನ್‌ಜಿಯಾಗ್ ನಗರದ ನಿವಾಸಿಯಾದ ಸೋಂಕಿತನಿಗೆ ಜ್ವರ ಮತ್ತು ಇತರ ರೋಗ ಲಕ್ಷಣಗಳಿಂದ ಏಪ್ರಿಲ್ 28ರಂದು ಆಸ್ಪತ್ರೆಗೆ ದಾಖಲಾಗಿದ್ರು.
ಪರೀಕ್ಷೆಯ ನಂತರ ಅವರಿಗೆ H10N3 ತಳಿಯ ಹಕ್ಕಿ ಜ್ವರದ ಸೋಂಕು ಪತ್ತೆಯಾಗಿದೆ. ಆದರೆ ಆ ವ್ಯಕ್ತಿಗೆ ಹೇಗೆ ಸೋಂಕು ತಗುಲಿತು ಎಂಬುದರ ವಿವರಗಳನ್ನು ಆಯೋಗ ನೀಡಿಲ್ಲ. ಕೋಳಿಗಳಲ್ಲಿ ಕಂಡು ಬರುವ ಈ ವೈರಸ್ ತಳಿ ವ್ಯಾಪಕವಾಗಿ ಹರಡುವ ಸಾಧ್ಯತೆ ತೀರ ಕಡಿಮೆ ಎಂದು ಎನ್‌ಎಚ್‌ಸಿ ತಿಳಿಸಿದೆ. ಆ ವ್ಯಕ್ತಿಯ ಆರೋಗ್ಯ ಸ್ಥಿರವಾಗಿರೋದಾಗಿಯೂ ತಿಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.