ಅಬ್ಬರಿಸುತ್ತಾ ರಾಜ್ಯಕ್ಕೆ ಅಪ್ಪಳಿಸಲಿದೆ ಮುಂಗಾರು..!
ಬೆಂಗಳೂರು : ಇಂದು ನೈಋತ್ಯ ಮುಂಗಾರು ಕೇರಳಕ್ಕೆ ಅಪ್ಪಳಿಸಲಿದ್ದು, ಜೂನ್ ಐದಕ್ಕೆ ರಾಜ್ಯಕ್ಕೆ ಬರುವ ಸಾಧ್ಯತೆಗಳಿವೆ.
ಹೀಗಾಗಿ ರಾಜ್ಯದಲ್ಲಿ ಜೂನ್ 6 ರವರೆಗೂ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿಯಾದ ಹಿನ್ನೆಲೆ ಜೂನ್ 4ರವರೆಗೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಮುಖ್ಯವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಬೆಂ.ಗ್ರಾಮಾಂತರ, ಬೆಂ.ನಗರ,
ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ, ರಾಯಚೂರು, ತುಮಕೂರಿನಲ್ಲಿ ಮಳೆಯಾಗಲಿದೆ.
ಮುಂದಿನ 5 ದಿನಗಳು ರಾಜ್ಯದ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ವಿಶೇಷವಾಗಿ ಬೀದರ್,
ಕಲಬುರಗಿ, ಗದಗ, ಕೊಪ್ಪಳ ಮತ್ತು ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.