ಕೈಮುಗಿದು ಕೇಳಿಕೊಳ್ಳುತ್ತೇವೆ, ಎಲ್ಲರಿಗೂ ಲಸಿಕೆ ಕೊಡಿ : ಡಿ.ಕೆ.ಶಿವಕುಮಾರ್
ಹಾಸನ : ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ, ಲಸಿಕೆ ಕೊಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತಿದ್ದೇವೆ. ಎಲ್ಲರಿಗೂ ಲಸಿಕೆ ಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ವ್ಯಾಕ್ಸಿನೇಷನ್ ಹಾಕಿಸಿಕೊಳ್ಳಲು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಕೊಳ್ಳುವಂತೆ ತಿಳಿಸಿದೆ.
ಆದರೆ ಗ್ರಾಮೀಣ ಭಾಗದ ಜನರಿಗೆ ಅದು ಗೊತ್ತಾಗುವುದಿಲ್ಲ. ಹಾಗಾಗಿ ನಮ್ಮ ಕಾರ್ಯಕರ್ತರಿಗೆ ಸೂಚನೆ ಕೊಟ್ಟಿದ್ದೆ.
ಅದರಂತೆ ಗೊತ್ತಿಲ್ಲದವರು ಆನ್ ಲೈನ್ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಸರ್ಕಾರ ಆನ್ ಲೈನ್ ರಿಜಿಸ್ಟ್ರೇಷನ್ ನಿಲ್ಲಿಸಿದೆ ಎಂದು ಆರೋಪಿಸಿದರು.
ಇದೇ ವೇಳೆ ಸರ್ಕಾರದ ಬಳಿ 18 ರಿಂದ 44 ವರ್ಷದವರೆಗೆ ಯುವಕರಿಗೆ ನೀಡಲು ಯಾವ ಲಸಿಕೆಯೂ ಇಲ್ಲ ಎಂದು ದೂರಿದ ಅವರು, ನಮ್ಮ ಉದ್ದೇಶ ವ್ಯಾಕ್ಸಿನೇಷನ್ ನೀಡಬೇಕು.
ಜನರ ಜೀವ ಉಳಿಯಬೇಕು. ನಿಮ್ಮಲ್ಲಿ ಭಿಕ್ಷೆ ಬೇಡುತ್ತಿದ್ದೇವೆ. ಲಸಿಕೆ ಕೊಡಿ ಎಂದು ಕೈಮುಗಿದು ಕೇಳಿಕೊಳ್ಳುತ್ತಿದ್ದೇವೆ. ಎಲ್ಲರಿಗೂ ವ್ಯಾಕ್ಸಿನೇಷನ್ ನೀಡಿ ಎಲ್ಲರ ಜೀವ ಉಳಿಸಿ ಎಂದು ಬೇಡಿಕೊಂಡಿದರು









