ರವೆ ಲಾಡು
ಬೇಕಾಗಿರುವ ಪದಾರ್ಥಗಳು
ಚಿರೋಟಿ ರವೆ 1ಕಪ್
ತೆಂಗಿನಕಾಯಿ ತುರಿ 1 ಕಪ್
ಸಕ್ಕರೆಹುಡಿ 1 ಕಪ್
ಏಲಕ್ಕಿ ಪುಡಿ – 1/4 ಚಮಚ
ತುಪ್ಪ – 4 ಚಮಚ
ದ್ರಾಕ್ಷಿ, ಗೋಡಂಬಿ, ಬಾದಾಮಿ ಇತ್ಯಾದಿ – ಅಗತ್ಯವಿರುವಷ್ಟು

ಮಾಡುವ ವಿಧಾನ
ಮೊದಲಿಗೆ ಬಾಣಲೆಯಲ್ಲಿ ತುಪ್ಪ ಹಾಕಿ ಬಿಸಿ ಮಾಡಿ. ನಂತರ ಅದರಲ್ಲಿ ದ್ರಾಕ್ಷಿ, ಗೋಡಂಬಿ, ಬಾದಾಮಿಯನ್ನು ಹುರಿದು ಪಕ್ಕದಲ್ಲಿ ಇಟ್ಟುಕೊಳ್ಳಿ. ನಂತರ ಅದೇ ಬಾಣಲೆಯಲ್ಲಿ ಸಣ್ಣ ಉರಿಯಲ್ಲಿ ಚಿರೋಟಿ ರವೆಯನ್ನು ಅದರ ಹಸಿ ವಾಸನೆ ಹೋಗುವವರೆಗೆ ಹುರಿಯಿರಿ. ನಂತರ ತಣ್ಣಗಾಗಲು ಬಿಡಿ.
ಬಳಿಕ ಒಂದು ಮಿಕ್ಸಿಂಗ್ ಬೌಲ್ ತೆಗೆದುಕೊಂಡು ಅದಕ್ಕೆ ತೆಂಗಿನಕಾಯಿ ತುರಿ, ಸಕ್ಕರೆ ಪುಡಿ, ಏಲಕ್ಕಿ ಪುಡಿ, ಹುರಿದ ದ್ರಾಕ್ಷಿ, ಗೋಡಂಬಿ, ಬಾದಾಮಿ, ಚಿರೋಟಿ ರವೆ ಸೇರಿಸಿ ಚೆನ್ನಾಗಿ ಕಲಸಿ. ಬಳಿಕ 30 ನಿಮಿಷಗಳ ಕಾಲ ಹಾಗೆಯೇ ಬಿಡಿ. ಬೇಕಿದ್ದರೆ ಸ್ವಲ್ಪ ಹಾಲನ್ನು ಸೇರಿಸಿ ಕಲಸಿ. ನಂತರ ಉಂಡೆ ಕಟ್ಟಿ. ಈಗ ರುಚಿಯಾದ ರವೆ ಲಾಡು ಸವಿಯಲು ಸಿದ್ಧವಾಗಿದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1399554408791396355?s=19
https://twitter.com/SaakshaTv/status/1399886565392932865?s=19
https://twitter.com/SaakshaTv/status/1399944087009042434?s=19
https://twitter.com/SaakshaTv/status/1399916926625669121?s=19
https://twitter.com/SaakshaTv/status/1399524159336718337?s=19
#Saakshatv #cookingrecipe #raveladdu








