‘ದೇವರ ನಾಡಿ’ಗೆ ‘ಮಾನ್ಸೂನ್’ ಪ್ರವೇಶ – ಕರ್ನಾಟಕದಲ್ಲೂ 2 ದಿನ ಭಾರೀ ಮಳೆಯ ಮುನ್ಸಸೂಚನೆ
ಕೇರಳ: ದೇವರ ನಾಡು ಕೇರಳಕ್ಕೆ ನೈಋತ್ಯ ಮಾನ್ಸೂನ್ ಮಾರುತಗಳು ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ ಖಚಿತಪಡಿಸಿದೆ. ಈ ಕುರಿತು ಭಾರತೀಯ ಹವಾಮಾನ ಇಲಾಖೆಯ ಪ್ರಧಾನ ನಿರ್ದೇಶಕ ಮೃತ್ಯುಂಜಯ ಮೋಹಪಾತ್ರ ಮಾಹಿತಿ ನೀಡಿದ್ದು, ಇನ್ನೂ 2 ದಿನಗಳು ತಡವಾದರೂ ಅಂತಿಮವಾಗಿ ನೈಋತ್ಯ ಮಾನ್ಸೂನ್ ಮಾರುತಗಳು ಕೇರಳ ಪ್ರವೇಶಿಸಿವೆ. ಕೇರಳದ ದಕ್ಷಿಣ ಭಾಗಗಳಿಗೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು, ಅರಬ್ಬಿ ಸಮುದ್ರದ ದಕ್ಷಿಣ ಹಾಗೂ ಮಧ್ಯ ಭಾಗ, ಕೇರಳ, ಲಕ್ಷದ್ವೀಪದ ಉಳಿದ ಭಾಗ, ತಮಿಳುನಾಡು ಹಾಗೂ ಪುದುಚೇರಿಯ ಕೆಲವು ಭಾಗಗಳು, ರಾಯಲ್‍ಸೀಮಾ, ಬಂಗಾಳ ಕೊಲ್ಲಿಯ ದಕ್ಷಿಣ ಹಾಗೂ ಮಧ್ಯ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಾನ್ಸೂನ್ ಮಾರುತಗಳು ಮಳೆ ಸುರಿಸಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಂದ್ಹಾಗೆ ಜೂನ್ 1ರಂದೇ ನೈಋತ್ಯ ಮಾನ್ಸೂನ್ ಮಾರುತಗಳು ಪ್ರತಿ ಬಾರಿ ಕೇರಳ. ಆದರೆ ಈ ವರ್ಷ 2 ದಿನಗಳ ಕಾಲ ತಡವಾಗಿದೆ. ಕೇರಳ ಪ್ರವೇಶಿಸಿರುವ ಮಾನ್ಸೂನ್ ಮಾರುತಗಳು ಭಾರತದಲ್ಲಿ 4 ತಿಂಗಳ ಕಾಲ ಸುಧೀರ್ಘ ಮಳೆಗಾಲದ ಆರಂಭವನ್ನು ಸೂಚಿಸುತ್ತವೆ ಎಂದು ಹವಾಮಾನ ಇಲಾಖೆ ತಿಳಿಸಿದೆ .







