ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತೆ : ಸುರೇಶ್ ಕುಮಾರ್
ಬೆಂಗಳೂರು : ಕೊರೊನಾ ಎರಡನೇ ಅಲೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಈಗಾಗಲೇ ಸಿಬಿಎಸ್ ಸಿ ಪರೀಕ್ಷೆಗಳು ರದ್ದುಗೊಂಡಿದ್ದು,ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ. ಆದ್ರೆ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲು ಸರ್ಕಾರ ಚಿಂತನೆ ನಡೆಸಿದೆ.
ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಸಂಬಂಧ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಧ್ಯಮಗೋಷ್ಠಿ ನಡೆಸುತ್ತಿದ್ದಾರೆ. ತಜ್ಞರ ಸಲಹೆ ಸೂಚನೆ, ಹಿರಿಯ ಸಚಿವ, ಪೋಷಕರ, ಮಕ್ಕಳ ಅಭಿಪ್ರಾಯ ಸಂಗ್ರಹಿಸಿದ್ದೇವೆ. ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಇಲಾಖೆ ಒಂದು ನಿರ್ಧಾರಕ್ಕೆ ಬಂದಿದೆ. ಯಾವುದೇ ನಿರ್ಧಾರ ತೆಗೆದುಕೊಂಡರೂ ಒಂದು ವರ್ಗಕ್ಕೆ ಬೇಸರ ಇದ್ದೇ ಇರುತ್ತೆ. ಆದರೂ ನಾವು ವಿಸ್ತøತವಾಗಿ ಚರ್ಚೆ ನಡೆಸಿದ್ದೇವೆ. ಪಿಯುಸಿ ಪರೀಕ್ಷೆಯನ್ನ ಸದ್ಯಕ್ಕೆ ನಡೆಸೋದಿಲ್ಲ. ಈ ವರ್ಷ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ.
ಎಲ್ಲಾ ವಿದ್ಯಾರ್ಥಿಗಳು ಗ್ರೇಡ್ ಆಧಾರಲ್ಲಿ ಪಾಸ್ ಮಾಡಲಾಗುವುದು. ರಾಜ್ಯದಲ್ಲಿ ಪರೀಕ್ಷೆ ನಡೆಸುವುದು, ರದ್ದಾಗುವುದು ತಜ್ಞರು ನೀಡುವ ವರದಿಯ ಮೇಲೆ ನಿಂತಿತ್ತು. ತಜ್ಞರ ವರದಿ ಆಧಾರಿಸಿ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ್ದಾರೆ.
ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತೆ..!
ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಿರುವ ಸರ್ಕಾರ, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುವುದಾಗಿ ತಿಳಿಸಿದೆ. ಜುಲೈ ಮೂರನೇ ವಾರ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲಾಗುವುದು.ಒಂದು ಕೋರ್ಸ್ ಸಬ್ಜೆಕ್, ಸೈನ್, ಮ್ಯಾಥಮೇಟಿಕ್ಸ್, ಸೋಷಿಯಲ್ ಸೈನ್ಸ್ ಈ ಮೂರು ವಿಷಯಗಳ ಒಳಗೊಂಡು ಒಂದು ಪೇಪರ್ ಪರೀಕ್ಷೆ ಮಾಡಲಾಗುತ್ತದೆ. ಮಲ್ಟಿ ಚಾಯಿಸ್ ಪ್ರಶ್ನೆಗಳಿರುತ್ತದೆ. ಪ್ರತಿ ಪ್ರಶ್ನೆಗೆ 4 ರೀತಿಯ ಆಯ್ಕೆ ಇರುತ್ತದೆ. ಅವುಗಳನ್ನು ಆಯ್ಕೆ ಮಾಡಬಹುದು ಎಂದರು.
ಇನ್ನು ಎರಡನೇ ಪೇಪರ್ ಆಗಿ ಭಾಷೆಯನ್ನು ನಡೆಸಲಾಗುತ್ತದೆ. ಈ ಬಗ್ಗೆ ಎಸ್ ಎಸ್ ಎಲ್ ಸಿ ಪರೀಕ್ಷಾ ಮಂಡಳಿ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಕೋವಿಡ್ ಜುಲೈ 3ನೇ ವಾರದಂದು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಯಿಂದಲೂ ಮಾಹಿತಿ ಪಡೆದು ನಿರ್ಧಾರ ಮಾಡಲಾಗಿದೆ. ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಗ್ರೇಡ್ ಮಾದರಿಯಲ್ಲಿ ನಡೆಸಲು ನಿರ್ಧಾರ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವಂತ ವಿದ್ಯಾರ್ಥಿಗಳಿಗೆ ಎನ್-95 ಮಾಸ್ಕ್ ನೀಡಲಾಗುತ್ತದೆ. ಈ ಬಗ್ಗೆ ಸದ್ಯದಲ್ಲೇ ಮಾದರಿ ಪ್ರಶ್ನೆ ಪತ್ರಿಕೆ ಕೂಡ ಬಿಡುಗಡೆ ಮಾಡಲಾಗುತ್ತದೆ.
ಮಲ್ಟಿಪಲ್ ಚಾಯ್ಸ್ ಪ್ರಶ್ನೆ ಪತ್ರಿಕೆಯಲ್ಲಿ ಮೂರು ಸಬ್ಜೆಕ್ಟ್ ಗಳಿರುತ್ತದೆ. ಪ್ರತಿ ಸಬ್ಜೆಕ್ ಗೆ 40 ಅಂಕಗಳು. 120 ಅಂಕಗಳಿಗೆ ನಡೆಯುತ್ತಿರುವಂತ ಪರೀಕ್ಷೆಗೆ ಮೂರು ಗಂಟೆಗಳ ಕಾಲಾವಕಾಶ ನೀಡಲಾಗಿದೆ. ಪ್ರಶ್ನೆ ಸರಳ, ನೇರವಾಗಿರುತ್ತದೆ. ಯಾವ ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗದಂತ ಪ್ರಶ್ನೆಗಳನ್ನು ನೀಡಲಾಗುತ್ತದೆ. ಇನ್ನು ಗ್ರೇಡಿಂಗ್ ಮಾದರಿಯಲ್ಲಿ ಪರೀಕ್ಷೆಯ ಫಲಿತಾಂಶ ನೀಡಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.









