ನವದೆಹಲಿ: ಕೊರೊನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ಮುಂದುವರೆಸಲಾಗಿದೆ. ಇದರಿಂದಾಗಿ ಒಂದೆಡೆ ಜನರು ಆತಂಕ ಹೆಚ್ಚಾದರೇ ಮತ್ತೊಂದೆಡೆ ಆರ್ಥಿಕವಾಗಿ ಸಂಕಷ್ಟ ಎದುರಾಗಿದೆ. ಹಾಗಾಗಿ ಎಪ್ರಿಲ್ 20 ನಂತರ ಕೆಲವು ಕ್ಷೇತ್ರಗಳಿಗೆ ವಿನಾಯಿತಿ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಅದರಂತೆ ಏಪ್ರಿಲ್ 20ರ ನಂತರ ಇ ಕಾಮರ್ಸ್ ಸಂಸ್ಥೆಗಳಿಗೆ ವಿನಾಯತಿ ನೀಡಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯವು ಮಾರ್ಗಸೂಚಿಯಲ್ಲಿ ಹೇಳಿದೆ. ಅಮೆಜಾನ್, ಫ್ಲಿಪ್ ಕಾರ್ಟ್ ನಂಥ ಆನ್ ಲೈನ್ ಸೇವಾ ಸಂಸ್ಥೆಗಳು ಪೂರ್ಣಪ್ರಮಾಣದಲ್ಲಿ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಗೃಹ ಸಚಿವಾಲಯದ ಕಾರ್ಯದರ್ಶಿ ಅಜಯ್ ಭಲ್ಲಾ ತಿಳಿಸಿದ್ದಾರೆ.
ಇ ಕಾಮರ್ಸ್ ವೆಬ್ ತಾಣಗಳ ಸೇವೆ ರೆಡ್ ಅಲರ್ಟ್ ಇರುವ ಹಾಟ್ ಸ್ಪಾಟ್ ಪ್ರದೇಶಗಳಲ್ಲಿ ಆನ್ ಲೈನ್ ಶಾಪಿಂಗ್ ತಾಣಗಳಾದ ಅಮೆಜಾನ್, ಫ್ಲಿಪ್ ಕಾರ್ಟ್ ಮುಂತಾದ ತಾಣಗಳ ಸೇವೆ ಲಭ್ಯವಿರುವುದಿಲ್ಲ. ಎಲೆಕ್ಟ್ರಾನಿಕ್ ಸಾಮಾಗ್ರಿಗಳಾದ ಮೊಬೈಲ್ ಫೋನ್, ಟಿವಿ, ರೆಫ್ರಿಜರೇಟರ್, ಲ್ಯಾಪ್ ಟಾಪ್ ಮುಂತಾದವು ಏಪ್ರಿಲ್ 20ರ ನಂತರ ಆನ್ ಲೈನ್ ನಲ್ಲಿ ಮಾರಾಟಕ್ಕೆ ಲಭ್ಯವಿರಲಿದೆ ಎಂಬ ಆದೇಶವನ್ನು ಬದಲಾಯಿಸಲಾಗಿದೆ. ಮೇ 3 ರ ತನಕ ಈ ರೀತಿ non -essentials ಸಾಮಾಗ್ರಿಗಳನ್ನು ಮಾರುವಂತಿಲ್ಲ ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಮೇ 3 ರವರೆಗೂ ಆನ್ ಲೈನ್ ಮಾರುಕಟ್ಟೆಯಲ್ಲಿ ಅಗತ್ಯ ವಸ್ತುಗಳು ಮಾತ್ರ ಲಭ್ಯವಿರುತ್ತದೆ ಎಂದು ಸರ್ಕಾರ ಹೇಳಿದೆ.