ಹೈಕಮಾಂಡ್ ಸೂಚಿಸಿದ್ರೆ ತಕ್ಷಣ ರಾಜೀನಾಮೆ : ಬಿ.ಎಸ್.ಯಡಿಯೂರಪ್ಪ BS Yeddyurappa
ಬೆಂಗಳೂರು: ಹೈಕಮಾಂಡ್ ವಿಶ್ವಾಸವಿಟ್ಟು ನನಗೆ ಮುಖ್ಯಮಂತ್ರಿ ಸ್ಥಾನ ನೀಡಿದೆ. ಹೈಕಮಾಂಡ್ ಸೂಚಿಸಿದ ತಕ್ಷಣ ರಾಜೀನಾಮೆ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ವಿಧಾನಸೌಧದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಿದ ಸಿಎಂ ಯಡಿಯೂರಪ್ಪ, “ಎಲ್ಲಿಯವರೆಗೆ ಅಧಿಕಾರದಲ್ಲಿ ಇರುವಂತೆ ಹೇಳುತ್ತಾರೋ ಅಲ್ಲಿಯವರೆಗೂ ನಾನು ಮುಂದುವರೆಯುತ್ತೇನೆ.
ಹೈಕಮಾಂಡ್ ರಾಜೀನಾಮೆ ನೀಡುವಂತೆ ನನಗೆ ಸೂಚಿಸಿದರೆ ತಕ್ಷಣ ರಾಜೀನಾಮೆ ನೀಡುತ್ತೇನೆ. ಆದರೆ ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸ ಇದೆ” ಎಂದಿದ್ದಾರೆ.
ನನಗೊಂದು ಅವಕಾಶ ಮಾಡಿಕೊಟ್ಟಿದ್ದಾರೆ, ಅದನ್ನು ಶಕ್ತಮೀರಿ ಸದುಪಯೋಗ ಮಾಡಿಕೊಳ್ಳುವ ಪ್ರಯತ್ನ ಮಾಡುತ್ತೇನೆ.
ಉಳಿದಿದ್ದು ಹೈಕಮಾಂಡ್‍ಗೆ ಬಿಟ್ಟ ವಿಚಾರ. ಆದ್ದರಿಂದ ನಾನು ಯಾವುದೇ ಗೊಂದಲದಲ್ಲಿ ಇಲ್ಲ ಎಂದು ಸಿಎಂ ಬಿಎಸ್ ವೈ ಇದೇ ಮೊದಲ ಬಾರಿಗೆ ನಾಯಕತ್ವ ಬದಲಾವಣೆ ಬಗ್ಗೆ ಮೌನ ಮುರಿದಿದ್ದಾರೆ.