ಎಸೆಸೆಲ್ಸಿ, ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನ ಪಾಸ್ ಮಾಡಿ : ವಾಟಾಳ್
ಬೆಂಗಳೂರು : ಕೊಒರನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಲಾಗಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನ ಕೂಡ ಮಲ್ಟಿಪಲ್ ಚಾಯ್ಸ್ ರೀತಿ ಎರಡು ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಈ ಮಧ್ಯೆ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವಂತೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.
ರಿಪೀಟರ್ಸ್ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿವಾಸದ ಮುಂದೆ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಪಿಯುಸಿ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಪಾಸ್ ಮಾಡಿದ್ದೀರಿ. ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೇರೇ ಆರೋಗ್ಯ ಇದೆಯೇ? ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನು ಸಹ ಪಾಸ್ ಮಾಡಿ ಎಂದು ಆಗ್ರಹಿಸಿದರು.
ಇದೇ ವೇಳೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಆರೋಗ್ಯದ ಹಿತ ದೃಷ್ಟಿಯಿಂದ ಹಾಗು ಪಿಯುಸಿ ರಿಪೀಟರ್ಸ್ ವಿದ್ಯಾರ್ಥಿಗಳನ್ನ ಪರೀಕ್ಷೆಗಳಿಲ್ಲದೆ ಪಾಸ್ ಮಾಡಬೇಕು ಎಂದು ಒತ್ತಾಯಿಸಿದರು.