ಟ್ವಿಟರ್ ಗೆ ಕೊನೆಯ ಎಚ್ಚರಿಕೆ ನೀಡಿದ ಕೇಂದ್ರ
ನವದೆಹಲಿ: ಹೊಸ ಐಟಿ ಮಾರ್ಗಸೂಚಿಯನ್ನು ಸಾಮಾಜಿಕ ಜಾಲತಾಣಗಳಿಗೆ ಸೂಚಿಸಿರುವ ಕೇಂದ್ರ ಸರ್ಕಾರವು ಇದೀಗ ಟ್ವಿಟರ್ ಗೆ ಕಡೆಯ ಎಚ್ಚರಿಕೆಯನ್ನ ನೀಡಿದೆ.. ಟ್ವಿಟ್ಟರ್ ಗೆ ನೋಟೀಸ್ ಕಳುಹಿಸಿರುವ ಕೇಂದ್ರ ತಕ್ಷಣ ಹೊಸ ಐಟಿ ಮಾರ್ಗಸೂಚಿಯನ್ನು ಪಾಲಿಸುವಂತೆ ಖಡಕ್ ಸೂಚನೆ ನೀಡಿದೆ.
ಸೋಷಿಯಲ್ ಮೀಡಿಯಾಗಳು ಹೊಸ ಐಟಿ ನೀತಿಗಳನ್ನು ಅಳವಡಿಸಿಕೊಳ್ಳಲು ಈಗಾಗಲೆ ನೀಡಲಾಗಿದ್ದ ಗಡುವು ಮೇ 26ಕ್ಕೆ ಅಂತ್ಯವಾಗಿದೆ. ಆದರೂ ಟ್ವಿಟರ್ ಹೊಸ ನೀತಿಯನ್ನು ಅನುಸರಿಸಿಲ್ಲ. ಈ ಹಿನ್ನೆಲೆಯಲ್ಲಿ ಇದೀಗ ಕೊನೆಯ ನೋಟೀಸ್ ನೀಡಿದೆ..
ಇದರ ಅನ್ವಯ ಶೀಘ್ರವೇ ಕೇಂದ್ರ ಸರ್ಕಾರದ ಹೊಸ ಐಟಿ ಮಾರ್ಗಸೂಚಿಯನ್ನು ಅಳವಡಿಸಿಕೊಳ್ಳಬೇಕು. ಟ್ವಿಟರ್ ಗೆ ದೂರು ಪರಿಹಾರಕ್ಕೆ ಸೂಕ್ತ ವ್ಯವಸ್ಥೆಯಿರಬೇಕು. ಜನರಿಗೆ ಸುರಕ್ಷತೆ ವಾತಾವರಣ ಕಲ್ಪಿಸಬೇಕು ಎಂದು ಸೂಚಿಸಿದೆ. ಒಂದುವೇಳೆ ಹೊಸ ಐಟಿ ಮಾರ್ಗಸೂಚಿ ಪಾಲಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ. ಐಟಿ ಕಾಯ್ದೆ 79 ಅಡಿ ನೀಡಲಾಗುವ ವಿನಾಯಿತಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ವಾರ್ನಿಂಗ್ ಸಹ ನೀಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








