ಕೊರೊನಾ ರಿಪೋರ್ಟ್ : 24 ಗಂಟೆಯಲ್ಲಿ 1,00,636 ಮಂದಿಗೆ ಸೋಂಕು Corona Report
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಲೇ ಇದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,00,636 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 2,427 ಸೋಂಕಿನಿಂದ ಮಂದಿ ಸಾವನ್ನಪ್ಪಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ನಿನ್ನೆ 1,00,636 ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.
2,427 ಸೋಂಕಿನಿಂದ ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,89,09,975ಕ್ಕೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 3,49,186ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 1,74,399 ಮಂದಿ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ಈವರೆಗೂ 2,71,59,180 ಸೋಂಕಿತರು ಗುಣಮುಖರಾಗಿದ್ದಾರೆ. ಪ್ರಸ್ತುತ ದೇಶದಲ್ಲಿ 14,01,609 ಸಕ್ರಿಯ ಕೋವಿಡ್ ಪ್ರಕರಣಗಳಿವೆ.
ದೇಶಾದ್ಯಂತ ಇಲ್ಲಿಯವರೆಗೆ 23,27,86,482 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ.










