ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಸ್ಯಾಂಡಲ್ ವುಡ್ , ಬಾಲಿವುಡ್ , ಟಾಲಿವುಡ್ , ಕಾಲಿವುಡ್ ನ ಅನೇಕ ಸಿನಿಮಾ ತಾರೆಯರು ಬಡವರಿಗೆ , ಕೋವಿಡ್ ಸೋಂಕಿತರಿಗೆ ತಮಗೆ ತೋಚಿದ ಸಹಾಯಗಳನ್ನ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್ , ಶ್ರೀಮುರುಳಿ, ಯಶ್ , ಪುನೀತ್ ರಾಜ್ ಕುಮಾರ್ , ಉಪೇಂದ್ರ ರಾಗಿಣಿ, ಅಕ್ಷಯ್ ಕುಮಾರ್ , ಸಲ್ಮಾನ್ ಖಾನ್ , ಸೋನು ಸೂದ್ , ಹೀಗೆ ಹಲವರು ಕಷ್ಟದ ಸಂದರ್ಭದಲ್ಲಿ ಸಹಾಯಾಸ್ತ ಚಾಚಿದ್ದಾರೆ.
ಮತ್ತೊಂದೆಡೆ ಅನೇಕ ಸೆಲೆಬ್ರಿಟಿಗಳು ಜೀವ ಕಳೆದುಕೊಂಡಿದ್ದಾರೆ.. ಇನ್ನೂ ಹಲವರು ತಮ್ಮರನ್ನ ಕಳೆದುಕೊಂಡ ದೂಃಖದಲ್ಲಿದ್ದಾರೆ. ಇನ್ನೂ ಅನೇಕರು ಆಗಾಗ ಸಾಮಾಜಿಕ ಜಾಲತಾಣಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಪ್ರಯತ್ನದಲ್ಲಿದ್ದಾರೆ.
ಇದೀಗ ನಟಿ ರಾಧಿಕಾ ಪಂಡಿತ್ ಫೋಟೋ ಒಂದನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಭರವಸೆಯ ಮಾತುಗಳನ್ನು ಹಂಚಿಕೊಂಡಿದ್ದಾರೆ. ಕೊರೊನಾ ಹಾವಳಿಯಿಂದ ಸಂಕಷ್ಟದಲ್ಲಿರುವ, ಪ್ರೀತಿ ಪಾತ್ರರನ್ನು ಕಳೆದುಕೊಂಡು ನೋವಿನಲ್ಲಿರೋರಿಗೆ ಧೈರ್ಯದ ಮಾತುಗಳನ್ನು ಆಡಿದ್ದಾರೆ.
ಇತ್ತೀಚಿಗಷ್ಟೆ ರಾಕಿಂಗ್ ಸ್ಟಾರ್ ಯಶ್ ಕೋಟಿಗಟ್ಟಲೇ ಹಣವನ್ನು ಕಷ್ಟದಲ್ಲಿರುವ ಚಿತ್ರರಂಗದ ಕರ್ಮಿಕರಿಗೆ ನೀಡಿದ್ದಾರೆ. 3 ಸಾವಿರ ಸಿನಿ ಕಾರ್ಮಿಕರಿಗೆ ಯಶ್ 5 ಸಾವಿರ ರೂ. ನೀಡುವ ಮೂಲಕ ನೆರವಿಗೆ ನಿಂತಿದ್ದಾರೆ. ಸಾವಿರಾರು ಕುಟುಂಬದ ಹಸಿವನ್ನು ನೀಗಿಸಿದ್ದಾರೆ. ಇದರ ಬೆನ್ನಲ್ಲೇ ಪತ್ನಿ ರಾಧಿಕಾ ಸಂಕಷ್ಟದಲ್ಲಿರೋರಿಗೆ ಭರವಸೆಯ ಮಾತುಗಳನ್ನು ಹೇಳಿದ್ದಾರೆ.
ಇಬ್ಬರು ಮಕ್ಕಳ ಜೊತೆ ಬೀಚ್ ನಲ್ಲಿ ಕುಳಿತಿರುವ ಫೋಟೋ ಶೇರ್ ಮಾಡಿ ಧೈರ್ಯದ ಮಾತುಗಳನ್ನು ಹೇಳಿದ್ದಾರೆ. ‘ಇದು ತುಂಬ ಕಷ್ಟದ ಸಮಯ. ನಾವೆಲ್ಲರೂ ಪಾತ್ರರನ್ನು ಕಳೆದುಕೊಂಡವರ ನೋವು ಸಂಕಟಕ್ಕೆ ಸಾಕ್ಷಿಯಾಗಿದ್ದೇವೆ. ನಾವು ಭಯದಲ್ಲಿ ಜೀವನ ನಡೆಸುತ್ತಿದ್ದೇವೆ. ಮಾನಸಿಕ ಹಿಂಸೆ ಅನುಭವಿಸುತ್ತಿದ್ದೇವೆ. ಮುಂದೆ ಏನು ಎನ್ನುವುದು ತಿಳಿದಿಲ್ಲ.’
‘ಆದರೆ ದಯವಿಟ್ಟು ಒಂದು ಮಾತನ್ನು ಪ್ರತಿ ದಿನ ನಿಮಗೆ ನೀವೇ ಹೇಳಿಕೊಳ್ಳಿ. ಪರಿಸ್ಥಿತಿ ಎಷ್ಟೇ ಕೆಟ್ಟದಾಗಿದ್ದರೂ ನಾವು ಭರವಸೆ ಇಡುತ್ತೇವೆ, ನಂಬಿಕೆ ಇಡುತ್ತೇವೆ, ಹೋರಾಡುತ್ತೇವೆ, ಎಲ್ಲರೂ ಜೊತೆಯಾಗಿ ನಿಂತು ಈ ಕಷ್ಟದಿಂದ ಹೊರಬರುತ್ತೇವೆ’ ಎಂದು ಧೈರ್ಯಯ ಮಾತುಗಳನ್ನಾಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








