ಕೋವಿಡ್ ಸಂಕಷ್ಟ – ವಿದೇಶಿ ಪ್ರಯಾಣಿಕರಲ್ಲಿ ಮತ್ತೊಂದು ರೂಪಾಂತರಿ ಕೊರೊನಾ ವೈರಸ್ ಪತ್ತೆ..!
ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ..
ಈ ನಡುವೆ ಮತ್ತೊಂದು ಆಘಾತಕಾರಿ ಮಾಹಿತಿ ಬಹಿರಂಗಗವಾಗಿದೆ.. ಹೌದು ಕೆಲವು ವಿದೇಶೀ ಪ್ರಯಾಣಿಕರಲ್ಲಿ ಮತ್ತೊಂದು ರೂಪಾಂತರ ಪಡೆದ ಕೊರೊನಾ ಸೋಂಕನ್ನು ಪುಣೆಯ ರಾಷ್ಟ್ರೀಯ ಇನ್ಸಿಟಿಟ್ಯೂಟ್ ಆಫ್ ವಿರೋಲಜಿ ಸಂಸ್ಥೆ ಪತ್ತೆ ಹಚ್ಚಿದೆ.
ಬ್ರೆಜಿಲ್ ಮತ್ತು ಇಂಗ್ಲೆಂಡ್ ನಿಂದ ಭಾರತಕ್ಕೆ ಆಗಮಿಸಿದ ವಿದೇಶೀ ಪ್ರಯಾಣಿಕರಲ್ಲಿ B.1.1.28.2 ಎಂದು ರೂಪಾಂತರಿ ಕೊರೊನಾವನ್ನು ಪತ್ತೆ ಆಗಿದೆ ಎಂದು ನೀವ್ ಹೇಳಿದೆ. ಭಾರತದಲ್ಲಿ ಅತ್ಯಂತ ಹೆಚ್ಚು ಜೀವಗಳನ್ನು ಪಡೆದ ಕೊರೊನಾ ಎರಡನೇ ಅಲೆಯಲ್ಲಿ ಪತ್ತೆಯಾದ SARS-cov-2ನ B.1.617 ಸೋಂಕಿಗಿಂತ ಇದು ಹೆಚ್ಚು ಅಪಾಯಕಾರಿಯಾಗುವ ಸಾಧ್ಯತೆ ಇದ್ದು, ಈ ಬಗ್ಗೆ 10 ಲ್ಯಾಬೋರೇಟರಿಗಳಲ್ಲಿ ಗುಣಲಕ್ಷಣಗಳ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ನೀವ್ ಮಾಹಿತಿ ನೀಡಿದೆ.
ಮ್ಯಾನ್ಮಾರ್ – ಆಂಗ್ ಸಾನ್ ಸೂಕಿ ವಿರುದ್ಧದ ಪ್ರಕರಣಗಳ ವಿಚಾರಣೆ 14ರಿಂದ ಆರಂಭ..!
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.