ಒಂದೇ ವರ್ಷದಲ್ಲಿ ಪೆಟ್ರೋಲ್ ಬೆಲೆ 25.07 ರೂ. ಹೆಚ್ಚಳ : ಕಾಂಗ್ರೆಸ್ ಪ್ರತಿಭಟನೆ
ಹೈದರಾಬಾದ್ : ಕೊರೊನಾ ಕಾಟ, ಲಾಕ್ ಡೌನ್ ಸಂಕಷ್ಟದ ಮಧ್ಯೆ ಜನರಿಗೆ ಗಾಯದ ಮೇಲೆ ಬರೆ ಎಳೆದಂತೆ ದೇಶದಲ್ಲಿ ತೈಲ ಬೆಲೆ ಏರಿಕೆಯಾಗುತ್ತಲೇ ಇದೆ.
ಕಳೆದ ವರ್ಷ ಜೂನ್ ನಲ್ಲಿ ಪೆಟ್ರೋಲ್ ಲೀಟರ್ ಗೆ 74.93 ರೂ. ಇತ್ತು. ಆದ್ರೆ ಒಂದೇ ವರ್ಷದಲ್ಲಿ 25.07 ರೂ. ಹೆಚ್ಚಳವಾಗಿದೆ.
ಈ ಹಿನ್ನೆಲೆಯಲ್ಲಿ ಬೆಲೆ ನಿಯಂತ್ರಿಸದ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಪೆಟ್ರೋಲ್ ಪಂಪ್ಗಳ ಮುಂದೆ ಪ್ರತಿಭಟಿಸಲು ಕಾಂಗ್ರೆಸ್ ಮುಂದಾಗಿದೆ.
ಪದೆ ಪದೇ ತೈಲ ಬೆಲೆ ಏರಿಕೆಯಿಂದಾಗಿ ದೇಶದ ಹಲವಾರು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ ಈಗಾಗಲೇ ಶತಕ ಬಾರಿಸಿದೆ.
ಇನ್ನುಳಿದ ರಾಜ್ಯಗಳಲ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಸೆಂಚೂರಿ ಹೊಡೆಯಲಿದೆ.
ರಾಜಸ್ಥಾನ, ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ ರಾಜ್ಯಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಗೆ 100 ರೂ.ಗಳಿಗಿಂತ ಹೆಚ್ಚಾಗಿದೆ.
ತೈಲ ಬೆಲೆಯನ್ನು ಆರಂಭದಿಂದಲೂ ಟೀಕೆ ಮಾಡುತ್ತಲೇ ಬಂದಿರುವ ಕಾಂಗ್ರೆಸ್, ಇದೀಗ ತೈಲ ಬೆಲೆ ಏರಿಕೆ ಖಂಡಿಸಿ ಜೂನ್ 11 ರಂದು ದೇಶದಾದ್ಯಂತ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದೆ.









