ADVERTISEMENT
Sunday, August 9, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ತಜ್ಞರ ಸಲಹೆ ಆಧರಿಸಿ ಅನ್ ಲಾಕ್ ಸ್ವರೂಪ ನಿರ್ಧಾರ:  ಸಚಿವ ಡಾ.ಕೆ.ಸುಧಾಕರ್

admin by admin
June 10, 2021
in Newsbeat, State, ರಾಜ್ಯ
dr sudhakar saakshatv bengaluru
Share on FacebookShare on TwitterShare on WhatsappShare on Telegram

ತಜ್ಞರ ಸಲಹೆ ಆಧರಿಸಿ ಅನ್ ಲಾಕ್ ಸ್ವರೂಪ ನಿರ್ಧಾರ:  ಸಚಿವ ಡಾ.ಕೆ.ಸುಧಾಕರ್

dr sudhakar saakshatvಬೆಂಗಳೂರು, ಒಂದೇ ಬಾರಿಗೆ ಎಲ್ಲ ಚಟುವಟಿಕೆಗಳಿಗೆ ಅವಕಾಶ ನೀಡಿದರೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಬಹುದು. ಅನ್ ಲಾಕ್ ಸ್ವರೂಪದ ಬಗ್ಗೆ ಮುಖ್ಯಮಂತ್ರಿಗಳು ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

Related posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

August 9, 2026
ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

August 9, 2026

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೆಲ ಚಟುವಟಿಕೆಗೆ ನಿರ್ಬಂಧ ಹೇರಿ, ಇನ್ನೂ ಕೆಲ ಚಟುವಟಿಕೆಗಳಿಗೆ ಅವಕಾಶ ನೀಡಬಹುದು. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ನೀಡುವ ಸಲಹೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಲಾಗುವುದು. ಮುಖ್ಯಮಂತ್ರಿಗಳು ಎಲ್ಲರೊಂದಿಗೆ ಚರ್ಚಿಸಿ ಅನ್ ಲಾಕ್ ಯಾವ ರೀತಿ ಇರಬೇಕೆಂದು ತೀರ್ಮಾನ ಮಾಡುತ್ತಾರೆ. ಪಾಸಿಟಿವಿಟಿ ದರ ಶೇ.5 ಕ್ಕಿಂತ ಕಡಿಮೆ, 5 ಸಾವಿರಕ್ಕಿಂತ ಕಡಿಮೆ ಪ್ರಕರಣ ಇದ್ದರೆ ಅನ್ ಲಾಕ್ ಮಾಡಬಹುದೆಂಬ ಅಭಿಪ್ರಾಯ ಇದೆ ಎಂದರು.

lockdown bengaluru karnataka saakshatvಅನ್ ಲಾಕ್ ಬಗ್ಗೆ ಯಾವುದೇ ಗೊಂದಲ ಇಲ್ಲ. ಮಹಾರಾಷ್ಟ್ರದಲ್ಲಿ ಪ್ರಕರಣ ಇಳಿಕೆಯಾದ ಬಳಿಕ ಅನ್ ಲಾಕ್ ಕಡೆಗೆ ಹೋಗಿದ್ದಾರೆ. ಆ ರಾಜ್ಯಕ್ಕಿಂತ ಬಹಳ ಬೇಗ ನಮ್ಮಲ್ಲಿ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳು ಚರ್ಚಿಸಲಿದ್ದಾರೆ. ಕೆಲ ದೇಶಗಳಲ್ಲಿ ಮೂರನೇ ಅಲೆಯಲ್ಲಿ ಮಕ್ಕಳಿಗೆ ತೀವ್ರ ಸಮಸ್ಯೆಯಾಗಿಲ್ಲ. ಅನೇಕ ಮಕ್ಕಳಿಗೆ ಮನೆ ಆರೈಕೆ ಮಾಡಲಾಗಿದೆ ಏಮ್ಸ್ ನಿರ್ದೇಶಕರು ಹೇಳಿದ್ದಾರೆ. ಆದರೂ ರಾಜ್ಯದಲ್ಲಿ ಮಕ್ಕಳ ವಿಚಾರದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದರು.

ರಾಜ್ಯದಲ್ಲಿ ಕಪ್ಪು ಶಿಲೀಂಧ್ರದ 2,281 ಪ್ರಕರಣಗಳಿದ್ದು, 1,948 ಮಂದಿಗೆ ಚಿಕಿತ್ಸೆ ನೀಡುತ್ತಿದ್ದು, 102 ಮಂದಿ ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದರು.

ತಪ್ಪಿತಸ್ಥರ ರಕ್ಷಣೆ ಇಲ್ಲ

ಇತ್ತೀಚೆಗೆ ಹುಬ್ಬಳ್ಳಿ ಕಿಮ್ಸ್ ಗೆ ಭೇಟಿ ನೀಡಿದ್ದಾಗ ಬೇರೆ ಸಚಿವರು ದೂರು ನೀಡಿದ್ದರು. ಆಗ ಸ್ಥಳದಲ್ಲೇ ತನಿಖೆಗೆ ಆದೇಶಿಸಿ ವರದಿ ನೀಡಲು ಸೂಚಿಸಲಾಗಿತ್ತು. ವರದಿ ಸಿದ್ಧವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ನನ್ನ ಬಳಿ ವರದಿ ಬಂದ ಕೂಡಲೇ ಕ್ರಮ ವಹಿಸುತ್ತೇನೆ. ತಪ್ಪಿತಸ್ಥರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಈ ಬಗ್ಗೆ ಗಂಭೀರ ಕ್ರಮ ಜರುಗಿಸಲಾಗುವುದು ಎಂದರು.

ವೈದ್ಯರು ಆಸ್ಪತ್ರೆಯಿಂದ ಹೊರಗೆ 100 ಮೀಟರ್ ದೂರ ಹೋದ ಕೂಡಲೇ ಗೊತ್ತಾಗುವಂತೆ ಸರ್ಕಾರಿ ಆಸ್ಪತ್ರೆ, ಮೆಡಿಕಲ್ ಕಾಲೇಜುಗಳಲ್ಲಿ ಜಿಯೋ ಫೆನ್ಸಿಂಗ್ ತಂತ್ರಜ್ಞಾನ ಅಳವಡಿಸಲಾಗುವುದು. ಪ್ರತಿ ಆಸ್ಪತ್ರೆಯ ವಾರ್ಡ್, ಐಸಿಯುನಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಿ ಒಂದೇ ಕಡೆ ನಿರ್ವಹಣೆ ಮಾಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.

ಆಕ್ಸಿಜನ್ ಸಾಂದ್ರಕ ಕೊಡುಗೆ

ಹರ್ಬಲೈಫ್ ನ್ಯೂಟ್ರೀಶಿಯನ್ ಕಂಪನಿಯು ಕೊರೊನಾ ರೋಗಿಗಳ ಚಿಕಿತ್ಸೆಗಾಗಿ 150 ಆಕ್ಸಿಜನ್ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಿದೆ. ಸಪ್ತ ಸಚಿವರ ನಿವಾಸದಲ್ಲಿ ಸಚಿವರನ್ನು ಭೇಟಿಯಾದ ಕಂಪನಿಯ ಪ್ರತಿನಿಧಿಗಳು ಕಾನ್ಸಂಟ್ರೇಟರ್ ಗಳನ್ನು ಹಸ್ತಾಂತರಿಸಿದರು.

Tags: #cmbsybengalurucovid karnatakaCovid19covidindiaDr. K Sudhakarkarnataka
ShareTweetSendShare
Join us on:

Related Posts

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

ನನ್ನ ಮಂತ್ರಿಗಿರಿ ತಪ್ಪಿಸಲು ಸಿಎಂ ಮನೆಗೆ ಹೋಗಿದ್ರಾ? ಈಗ ಮಂತ್ರಿಯಾಗಿದ್ದೇನೆ ಜಗದ್ಗುರುಗಳೇ ಈಗೇನು ಮಾಡ್ತೀರಿ:ಹಾಕಿರೋ ಕಾವಿ ಬಟ್ಟೆಗೆ ವಿಧೇಯರಾಗಿರಿ- ಬಸವಜಯಮೃತ್ಯುಂಜಯ ಶ್ರೀಗಳ ವಿರುದ್ಧ ಕಾಶಪ್ಪನವರ ವಾಗ್ದಾಳಿ

by Shwetha
August 9, 2026
0

ಬಾಗಲಕೋಟೆ: ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಸಚಿವ ವಿಜಯಾನಂದ ಕಾಶಪ್ಪನವರ ನಡುವಿನ ಶೀತಲ ಸಮರ ಈಗ ಬೀದಿಗೆ ಬಂದಿದೆ. ತಮ್ಮ ಸಚಿವ ಸ್ಥಾನ ತಪ್ಪಿಸಲು ಸ್ವಾಮೀಜಿಗಳು...

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

ವಿದ್ಯಾರ್ಥಿಗಳ ಹೆಸರಲ್ಲಿ ಕಾಂಗ್ರೆಸ್ ಬೂಟಾಟಿಕೆ: ದೆಹಲಿಯಲ್ಲಿ ಬೆಂಬಲ ಜಾರ್ಖಂಡ್ ನಲ್ಲಿ ರಾಹುಲ್ ಗಾಂಧಿ‌ ಮೌನವೇಕೆ ಎಂದು ಬಿಜೆಪಿ ಪ್ರಶ್ನೆ

by Shwetha
August 9, 2026
0

ನವದೆಹಲಿ: ವಿದ್ಯಾರ್ಥಿಗಳ ಹೋರಾಟದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಇಂಡಿ ಒಕ್ಕೂಟವು ಡಬಲ್ ಸ್ಟ್ಯಾಂಡರ್ಡ್ ಅನುಸರಿಸುತ್ತಿವೆ ಎಂದು ಬಿಜೆಪಿ ತೀವ್ರವಾಗಿ ವಾಗ್ದಾಳಿ ನಡೆಸಿದೆ. ದೆಹಲಿಯಲ್ಲಿ ನಡೆಯುವ ಪ್ರತಿಭಟನೆಗಳಿಗೆ ಓಡೋಡಿ...

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

ಕ್ಯೂ ಲೈನ್‌ನಲ್ಲಿ 24 ಗಂಟೆ ಕಾಯುವ ಭಕ್ತರ ಕಷ್ಟಕ್ಕೆ ಟಿಟಿಡಿ ಚೆಕ್‌ಮೇಟ್: ಟಿಟಿಡಿಯಿಂದ ಮೂವಿಂಗ್ ಟೇಬಲ್ ಮ್ಯಾಜಿಕ್-ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಟೆಕ್ನಾಲಜಿ ಹವಾ ಶುರು

by Shwetha
August 9, 2026
0

ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ ಪ್ರತಿ ದಿನವೂ ಹೊಸ ದಾಖಲೆ ಬರೆಯುತ್ತಿದೆ. ವಿಶೇಷವಾಗಿ ಯಾವುದೇ ಟೋಕನ್ ಇಲ್ಲದೆ ಧರ್ಮ ದರ್ಶನಕ್ಕೆ ಬರುವ ಸಾಮಾನ್ಯ ಭಕ್ತರ ಸಂಖ್ಯೆ ಗಣನೀಯವಾಗಿ...

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳಲು ಹೋರಾಡಲಿ ಇಲ್ಲದಿದ್ದರೆ ಕೋಮಾಗೆ ಹೋಗುವುದು ಗ್ಯಾರಂಟಿ: ಸವದಿ ವ್ಯಂಗ್ಯದ ಏಟು

by Shwetha
August 9, 2026
0

ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಸಚಿವ ಲಕ್ಷ್ಮಣ ಸವದಿ ಅವರು ಪ್ರತಿಪಕ್ಷ ಬಿಜೆಪಿಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೆಲಸ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳಲಿದೆ ಎಂದು...

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

ಬೆಳೆಯುವ ನಾಯಕರನ್ನು ಮುಗಿಸಲು ದೊಡ್ಡ ಸಂಚು ನಡೆಯುತ್ತಿದೆ: ವಿರೋಧಿಗಳಿಗೆ ಜಮೀರ್ ಎಚ್ಚರಿಕೆ

by Shwetha
August 9, 2026
0

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆಗಳು ಬಿರುಸಾಗಿರುವ ಬೆನ್ನಲ್ಲೇ ಸಚಿವ ಜಮೀರ್ ಅಹ್ಮದ್ ಖಾನ್ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ರಾಜಕೀಯವಾಗಿ ಎತ್ತರಕ್ಕೆ ಬೆಳೆಯುವ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram