ಜೂ. 12 – 14ರವರೆಗೆ ಕೊಡಗಿನಲ್ಲಿ ಭಾರೀ ಮಳೆಯ ನಿರೀಕ್ಷೆ – ಆರೆಂಜ್ ಅಲರ್ಟ್ ಘೋಷಣೆ
ಕೊಡಗು : ಕೊಡಗು ಜಿಲ್ಲೆಯಾದ್ಯಂತ ಜೂನ್ 12ರಿಂದ 14 ರವರೆಗೆ ಗುಡುಗು , ಸಿಡಿಲು , ಗಾಳಿ ಸಹಿತ ಭಾರೀ ಮಳೆಯಾಗುವುದಾಗಿ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹೀಗಾಗಿ ಮುಂಜಾಗೃತಾ ಕ್ರಮವಾಗಿ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ ಜಿಲ್ಲಾಡಳಿತವು ಅನೇಕ ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. ಅದ್ರಂತೆ NDRF ತಂಡ ಜಿಲ್ಲೆಗೆ ಆಗಮಿಸಿ ಅಪಾಯಕಾರಿ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದೆ. ನದಿ ಪಾತ್ರದ ಹಾಗೂ ಅಪಾಯಕಾರಿ ಸ್ಥಳದಲ್ಲಿರುವ ನಿವಾಸಿಗಳಿಗೆ ನೋಟೀಸ್ ನೀಡಲಾಗಿದ್ದು, ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಲಾಗಿದೆ. ಮಳೆ ಸಂಬಂಧಿತ ತುರ್ತು ಸೇವೆ ಕಂಟ್ರೋಲ್ ರೂಂ ನಂ 08272-221077 ಸಂಪರ್ಕಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.