ರಿಯಲ್ ಹೀರೋ ಸೋನು ಸೂದ್ ಗೆ ಪದ್ಮವಿಭೂಷಣ ಪ್ರಶಸ್ತಿ ನೀಡುವಂತೆ ಒತ್ತಾಯ..!
ಮುಂಬೈ : ಕಳೆದ ಲಾಕ್ ಡೌನ್ ವೇಳೆಯಿಂದ ಇಲ್ಲಿವರೆಗೂ ಸೋನೂ ಸೂದ್ ಬಾಲಿವುಡ್ ನಟ ಸೋನು ಸೂದ್ ಲೆಕ್ಕವಿಲ್ಲದಷ್ಟು ಜನರಿಗೆ ನೆರವಾಗಿದ್ದಾರೆ.. ನೆರವಾಗುತ್ತಿದ್ದಾರೆ… ಕೊರೊನಾ ಸೋಂಕಿತರಿಗೆ ಆಕ್ಸಿಜನ್ , ವಿದ್ಯಾರ್ಥಿಗಳಿಗೆ ನೆರವು , ವಲಸೆ ಕಾರ್ಮಿಕರಿಗೆ ಸಹಾಯ ಸೇರಿ ಅನೇಕ ಕೆಲಸಗಳಲ್ಲಿ ತಮ್ಮನ್ನ ತಾವು ತೊಡಗಿಸಿಕೊಂಡಿದ್ದು, ಬಡವರ ಪಾಲಿನ ರಿಯಲ್ ಹೀರೋ ಆಗಿದ್ದಾರೆ.. ಸೋನು ಕೆಲಸದಿಂದ ನೆಟ್ಟಿಗರು ಪ್ರೇರೇಪಿತರಾಗಿದ್ದು, ಸೋನು ಸೂದ್ ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ..
IAS ಆಕಾಂಕ್ಷಿಗಳಿಗೆ ಫ್ರೀ ಕೋಚಿಂಗ್ ಆಫರ್ ನೀಡಿದ ರಿಯಲ್ ಹೀರೋ…!
ಈ ನಡುವೆ ಸಹೃದಯಿ ಸೋನು ಸೂದ್ ಗೆ ಭಾರತದ 2ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಪದ್ಮವಿಭೂಷಣ’ ನೀಡುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ನೆಟ್ಟಿಗರು #PadmaVibhushanForSonuSood ಹ್ಯಾಶ್‍ಟ್ಯಾಗ್ ಟ್ರೆಂಡ್ ಮಾಡುತ್ತಿದ್ದಾರೆ. ಅನೇಕರಿಗೆ ಸಹಾಯ ಮಾಡಿರುವ ಸೋನು ಸೂದ್‍ರನ್ನ ಗುರುತಿಸಿ ಭಾರತ ಸರ್ಕಾರ ಪದ್ಮವಿಭೂಷಣ ಪುರಸ್ಕಾರ ನೀಡಲೇಬೇಕು ಎಂದು ಒತ್ತಾಯ ಮಾಡ್ತಿದ್ದಾರೆ.. ಇನ್ನೂ ಈಕುರಿತು ಪ್ರತಿಕ್ರಿಯೆ ನೀಡಿರುವ ಸೋನು 135 ಕೋಟಿ ಭಾರತೀಯರ ಪ್ರೀತಿಯೇ ನನಗೆ ಅತ್ಯಂತ ದೊಡ್ಡ ಪ್ರಶಸ್ತಿ. ಇದನ್ನು ನಾನು ಈಗಾಗಲೇ ಸ್ಕೀಕರಿಸಿದ್ದೇನೆ ಎಂದು ಟ್ವೀಟ್ ಮೂಲಕ ಧನ್ಯವಾದಗಳನ್ನ ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








