ಭಾರತದ ಕೆಲವು ಕ್ರಮಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅನುಗುಣವಾಗಿಲ್ಲ ಎಂದ ವಿಶ್ವದ ದೊಡ್ಡಣ್ಣ..!
ಭಾರತದ ಕೆಲವು ಕ್ರಮಗಳು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅನುಗುಣವಾಗಿಲ್ಲ ಎಂದು ವಿಶ್ವದ ದೊಡ್ಡಣ್ಣ ಅಮೆರಿಕಾ ಅಭಿಪ್ರಾಯ ಹೊರಹಾಕಿದೆ. ಭಾರತದಲ್ಲಿ ಈಗಲೂ ಪ್ರಬಲ ಕಾನೂನಿನ ಆಡಳಿತವಿದ್ದು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವವಾಗಿಯೇ ಉಳಿದಿದೆ.
ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹೇರಲಾಗಿರುವ ನಿರ್ಬಂಧಗಳು ಸೇರಿದಂತೆ ಭಾರತ ಸರ್ಕಾರವು ಇತ್ತೀಚೆಗೆ ತೆಗೆದುಕೊಂಡಿರುವ ಕೆಲವು ಕ್ರಮಗಳು ಕಳವಳಕ್ಕೆ ಕಾರಣವಾಗಿವೆ ಎಂದು ದಕ್ಷಿಣ ಮತ್ತು ಮಧ್ಯ ಏಶ್ಯಕ್ಕಾಗಿನ ಉಸ್ತುವಾರಿ ಸಹಾಯಕ ವಿದೇಶ ಕಾರ್ಯದರ್ಶಿ ಡೀನ್ ತಾಂಪ್ಸನ್ ಹೇಳಿದ್ದಾರೆ.
‘ಪ್ರಬಲ ಕಾನೂನಿನ ಆಡಳಿತ ಮತ್ತು ಸ್ವತಂತ್ರ ನ್ಯಾಯಾಂಗದೊಂದಿಗೆ ಭಾರತ ಈಗಲೂ ಜಗತ್ತಿನ ಅತಿ ದೊಡ್ಡ ಪ್ರಜಾಸತ್ತೆಯಾಗಿಯೇ ಉಳಿದಿದೆ. ಅಮೆರಿಕದೊಂದಿಗಿನ ಅದರ ರಕ್ಷಣಾ ಭಾಗೀದಾರಿಕೆ ಬಲವಾಗಿದೆ ಹಾಗೂ ವಿಜೃಂಭಿಸುತ್ತಿದೆ.
ಆದರೆ, ಭಾರತ ಸರ್ಕಾರ ತೆಗೆದುಕೊಂಡಿರುವ ಕೆಲವು ಕ್ರಮಗಳು ಆ ದೇಶದ ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ಅನುಗುಣವಾಗಿಲ್ಲ. ಇದು ಕಳವಳದ ವಿಷಯವಾಗಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ‘ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹೆಚ್ಚುತ್ತಿರುವ ನಿರ್ಬಂಧಗಳು ಹಾಗೂ ಮಾನವಹಕ್ಕು ಹೋರಾಟಗಾರರು ಮತ್ತು ಪತ್ರಕರ್ತರ ಬಂಧನವು ಕಳವಳಕ್ಕೆ ಕಾರಣವಾಗಿರುವ ಭಾರತದ ಕೆಲವು ಕ್ರಮಗಳಾಗಿವೆ’ ಎಂದಿದ್ಧಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








