ಯುವತಿ ಮೇಲೆ ತಂದೆಯಿಂದಲೇ ನಿರಂತರ ಅತ್ಯಾಚಾರ – ಮಗುವಿಗೆ ಜನ್ಮ ನೀಡಿದ ಸಂತ್ರಸ್ತೆ
ಗುಜರಾತ್ : ಗುಜರಾತ್ ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.. 19 ಯುವತಿಯೊಬ್ಬಳ ಮೇಲೆ ಆಕೆಯ ತಂದೆಯೇ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ.. ಪರಿಣಾಮ ಇದೀಗ ಯುವತಿ ಮಗುವಿಗೆ ಜನ್ಮ ನೀಡಿದ್ದಾಳೆ. ಭಾವಾನಗರದ ಶಿಹೋರ್ ಪಟ್ಟಣದಲ್ಲಿ ಈ ಘಟನೆ ನಡೆದಿದೆ.. ಯುವತಿ ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ ನಂತರ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಯುವತಿಗೆ ಅನಾರೋಗ್ಯದ ಕಾರಣ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಆದ್ರೆ ಅಲ್ಲಿ ಆಕೆ ಗಂಡು ಮಗುವಿಗೆ ಜನ್ಮ ನೀಡಿದ ನಂತರವೇ ತಮದೆಯ ಅಸಲಿ ಮುಖ ಬಯಲಾಗಿದೆ. ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಅಥವಾ ಆಕೆ ಮಲಗಿದ್ದ ವೇಳೆ ಅನೇಕ ಬಾರಿ ತಂದೆಯೇ ಅತ್ಯಾಚಾರ ಎಸಗಿದ್ದಾನೆ. ಲೈಂಗಿಕ ದೌರ್ಜನ್ಯದ ಪರಿಣಾಮ ಯುವತಿ ಗರ್ಭಿಣಿಯಾಗಿದ್ದಾಳೆ. ಯುವತಿ ಮತ್ತು ನವಜಾತ ಶಿಶುವನ್ನು ಭಾವಾನಗರದ ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿತನಿಗೆ ಇಬ್ಬರು ಹೆಣ್ಣುಮಕ್ಕಳು, ಇಬ್ಬರು ಗಂಡುಮಕ್ಕಳು ಇದ್ದು, ಮೂವರು ಮದುವೆಯಾಗಿ ಪ್ರತ್ಯೇಕವಾಗಿ ವಾಸವಾಗಿದ್ದಾರೆ. ಆರೋಪಿ ಪತ್ನಿ, ಕಿರಿಯ ಪುತ್ರಿಯೊಂದಿಗೆ ಶಿಹೋರ್ ಪಟ್ಟಣದ ಕೊಳಗೇರಿಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.







