ಬಂಗಾಳದಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತನ ಬರ್ಬರ ಹತ್ಯೆ
ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳ ದೀದಿ ನಾಡಲ್ಲಿ ರಾಜಕೀಯ ದ್ವೇಶ ಮುಂದುವರೆದಿದೆ.. ಬಿಜೆಪಿ ಕಾರ್ಯಕರ್ತನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ… ಈ ಕೊಲೆಯನ್ನ ಟಿಎಂಸಿ ಕಾರ್ಯಕರ್ತರೇ ಮಾಡಿರುವುದಾಗಿ ಬಿಜೆಪಿ ಆರೋಪಿಸಿದೆ.
ಬಿಜೆಪಿಯ ಖೈರಶೋಲ್ ಗ್ರಾಮೀಣ ಮಂಡಳಿಯ ಸಹ ಅಧ್ಯಕ್ಷ ಮಿಥುನ್ ಬಾಘ್ರಿ ಹತ್ಯೆಗೀಡಾದ ಕಾರ್ಯಕರ್ತರಾಗಿದ್ದಾರೆ. ಬಿರ್ಭುಮ್ ನಲ್ಲಿ ಮಿಥುನ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಇನ್ನೂ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ಘೋಷಣೆ ಬಳಿಕ ಟಿಎಂಸಿ ಕಾರ್ಯಕರ್ತರ ದಾಳಿಯಿಂದಾಗಿ 37 ಬಿಜೆಪಿ ಕಾರ್ಯಕರ್ತರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಘಟಕದ ಅಧ್ಯಕ್ಷ ದಿಲೀಪ್ ಘೋಷ್ ಕಳೆದ ವಾರ ಆರೋಪಿಸಿದ್ದರು.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








