ಆರ್ಟಿಕಲ್370 ಬಗ್ಗೆ ವಿವಾದಾತ್ಮಾಕ ಹೇಳಿಕೆ ನೀಡಿದ ದಿಗ್ವಿಜಯ್ ಸಿಂಗ್..!
ನವದೆಹಲಿ : ಕಾಶ್ಮೀರ, ಆರ್ಟಿಕಲ್ 370 ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಇದೀಗ ತೀವ್ರ ಟೀಕೆಗೆ ಗುರಿಯಾಗಿದ್ದಾರೆ. ಕ್ಲಬ್‌ಹೌಸ್ ಸಾಮಾಜಿಕ ಜಾಲತಾಣದಲ್ಲಿ ಆಡಿದ ಮಾತು ಈಗ ವಿವಾದಕ್ಕೆ ಕಾರಣವಾಗಿದೆ. ಈ ಮಾತುಕತೆಯಲ್ಲಿ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದುಗೊಳಿಸಿರುವುದು ಹಾಗೂ ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದಕ್ಕೆ ದಿಗ್ವಿಜಯ್ ಸಿಂಗ್ ಬೇಸರವನ್ನು ವ್ಯಕ್ತಪಡಿಸಿದ್ದರು.
ಜೊತೆಗೆ ಮೋದಿ ಸರ್ಕಾರದ ಅವಧಿಯ ಬಳಿಕ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ವಿಚಾರದಲ್ಲಿ ಮರು ಪರಿಶೀಲನೆ ನಡೆಸುವುದಾಗಿಯೂ ಈ ಆಡಿಯೋ ಸಂವಾದದಲ್ಲಿ ದಿಗ್ವಿಜಯ್ ಸಿಂಗ್ ಹೇಳಿಕೆ ನೀಡಿದ್ದಾರೆ. ಇದು ಈಗ ಭಾರೀ ಟೀಕೆಗೆ ಗುರಿಯಾಗಿದೆ..
ಈ ಆಡಿಯೋ ಸಂವಾದದ ವಿಚಾರವಾಗಿ ಬಿಜೆಪಿ ಈಗ ತೀವ್ರ ಟೀಕೆಯನ್ನು ಮಾಡುತ್ತಿದ್ದು ದಿಗ್ವಿಜಯ್ ಸಿಂಗ್ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದೆ. ಅಲ್ಲದೇ ಪಾಕಿಸ್ತಾನದ ಜೊತೆಗೆ ಅವರು ಒಪ್ಪಂದವನ್ನು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ.
ಅಲ್ಲದೇ ಕ್ಲಬ್‌ಹೌಸ್ ಸಾಮಾಜಿಕ ಜಾಲತಾಣದ ಆಡಿಯೋ ಸಂವಾದದಲ್ಲಿ ದಿಗ್ವಿಜಯ್ ಸಿಂಗ್ ಈ ಮಾತುಕತೆಗಳನ್ನು ಆಡಿರುವುದು ಪಾಕಿಸ್ತಾನ ಮೂಲದ ಪತ್ರಕರ್ತೆಯ ಜೊತೆಗೆ ಎಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆರೋಪಿಸಿದ್ದಾರೆ. ಈ ವಿಚಾರವಾಗಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸ್ಪಷ್ಟನೆಯನ್ನು ನೀಡಬೇಕು ಎಂದು ಆಗ್ರಹಿಸಿದ್ದಾರೆ.
ದಿಗ್ವಿಜಯ ಸಿಂಗ್ ಅವರು ಭಾರತದ ವಿಷಕಾರುತ್ತಿದ್ದು ಪಾಕಿಸ್ತಾನದ ಜೊತೆಗೆ ಒಪ್ಪಂದ ಮಾಡಿಕೊಳ್ಳುತ್ತಿದ್ದಾರೆ. ಇದೇ ವ್ಯಕ್ತಿ ಪುಲ್ವಾಮ ದಾಳಿಯನ್ನು ಅಪಘಾತ ಎಂದು ಕರೆದಿದ್ದು 26/11 ಮುಂಬೈ ದಾಳಿ ಆರ್‌ಎಸ್‌ಎಸ್‌ನ ಪಿತೂರಿ ಎಂದು ಕರೆದಿದ್ದರು ಎಂದು ಸಂಬಿತ್ ಪಾತ್ರ ಟೀಕಿಸಿದ್ದಾರೆ.
ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮಣಿಶಂಕರ್ ಅಯ್ಯರ್ ಹೇಳಿಕೆಗಳನ್ನು ಉಲ್ಲೇಖಿಸಿ ಪಾಕಿಸ್ತಾನದೊಂದಿಗೆ ಕಾಂಗ್ರೆಸ್ ದೊಡ್ಡ ಪ್ರಮಾಣದಲ್ಲಿ ಕೈಜೋಡಿಸಿದ್ದು ದಿಗ್ವಿಜಯ್ ಸಿಂಗ್ ಅವರ ಈ ಮಾತು ಅದು ಭಾಗವಾಗಿದೆ ಎಂದಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.