ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಲ್ಲ. ಅದು ರಾಷ್ಟ್ರವಿರೋಧಿ ಪಕ್ಷ – ಶೋಭಾ ಕರಂದ್ಲಾಜೆ
ಕಣಿವೆ ರಾಜ್ಯದಲ್ಲಿ 370 ನೇ ವಿಧಿಯನ್ನು ಪುನಃ ಜಾರಿಗೊಳಿಸುವ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 370ನೇ ವಿಧಿಯನ್ನು ಹಿಂತೆಗೆದುಕೊಂಡಿರುವ ನಿರ್ಧಾರದ ಬಗ್ಗೆ ಪರಿಶೀಲಿಸುವುದಾಗಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಹೇಳಿದ್ದರು. ಕ್ಲಬ್‌ಹೌಸ್ ಆ್ಯಪ್‌ನಲ್ಲಿ ಪಾಕಿಸ್ತಾನ ಮೂಲದ ಪತ್ರಕರ್ತ ಶಹಜೇಬ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಈ ಹೇಳಿಕೆ ನೀಡಿದ್ದರು. ಇದಕ್ಕೆ ಸಂಬಂಧಿಸಿದ ಆಡಿಯೋ ಕ್ಲಿಪ್ ಅನ್ನು ಬಿಜೆಪಿ ಬಿಡುಗಡೆ ಮಾಡಿದೆ.
ಜೂನ್ 12 ರ ಶನಿವಾರ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿರುವ ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ಪಕ್ಷವು ತನ್ನ ಮಾನಸಿಕ ಸ್ಥಿರತೆಯನ್ನು ಕಳೆದುಕೊಂಡಿದೆ. ಕಾಂಗ್ರೆಸ್ ನಾಯಕರಿಗೆ ತಾವು ರಾಷ್ಟ್ರ ವಿರೋಧಿ ಹೇಳಿಕೆ ನೀಡುತ್ತಿದ್ದೇವೆ ಎಂದು ತಿಳಿದಂತೆ ಕಾಣುತ್ತಿಲ್ಲ. ಕಾಶ್ಮೀರ ವಿಭಜನೆಗೆ ಕಾಂಗ್ರೆಸ್ ಪಕ್ಷ ಕಾರಣವಾಗಿದೆ. ಲಕ್ಷಾಂತರ ಹಿಂದೂಗಳು ಅಲ್ಲಿ ಕೊಲ್ಲಲ್ಪಟ್ಟರೂ, ಪ್ರಧಾನಿ ಜವಾಹರಲಾಲ್ ನೆಹರು ಮೌನ ವಹಿಸಿದ್ದರು. ಕಾಶ್ಮೀರಿ ಪಂಡಿತರನ್ನು ರಾಜ್ಯವನ್ನು ಬಿಟ್ಟು ತೊರೆಯುವಂತೆ ಒತ್ತಾಯಿಸಲಾಯಿತು. ಹೆಣ್ಣು ಮಕ್ಕಳಿಗೆ ಅತ್ಯಾಚಾರ ಮತ್ತು ಕಿರುಕುಳ ನೀಡಲಾಯಿತು ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಕಾಂಗ್ರೆಸ್ ಪಾಕಿಸ್ತಾನವನ್ನು ಬೆಂಬಲಿಸುತ್ತಲೇ ಇತ್ತು. 370 ನೇ ವಿಧಿಯಿಂದಾಗಿ ಎಲ್ಲಾ ವಿಷಯಗಳು ನಡೆಯುತ್ತಿದೆ ಎಂದು ಇಡೀ ರಾಷ್ಟ್ರಕ್ಕೆ ತಿಳಿದಿತ್ತು. ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಸಂಯೋಜಿಸುವ ಪ್ರಯತ್ನದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಬಿಜೆಪಿ ಸರ್ಕಾರವು 370 ನೇ ವಿಧಿಯನ್ನು ರದ್ದುಪಡಿಸಿದೆ. ಇದು ಪ್ರತಿಯೊಬ್ಬ ಕಾಶ್ಮೀರಿ ಪ್ರಜೆಗೆ ಅಗತ್ಯವಾಗಿತ್ತು. ಈಗ ಕಾಶ್ಮೀರ ಶಾಂತಿಯುತವಾಗಿದೆ ಮತ್ತು ಅವರ ಜೀವನವು ಸಾಮಾನ್ಯ ಸ್ಥಿತಿಗೆ ಮರಳಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಹೇಳಿದರು.

ದಿಗ್ವಿಜಯ್ ಸಿಂಗ್ ಅವರ ಹೇಳಿಕೆ ಅವರ ವೈಯಕ್ತಿಕ ದೃಷ್ಟಿಕೋನವೇ ಅಥವಾ ಕಾಂಗ್ರೆಸ್ ಪಕ್ಷದ ಅಭಿಪ್ರಾಯವೇ ಎಂದು ಕಾಂಗ್ರೆಸ್ ಸ್ಪಷ್ಟಪಡಿಸುವ ಅಗತ್ಯವಿದೆ. ಅದು ಅವರ ವೈಯಕ್ತಿಕ ಹೇಳಿಕೆಯಾಗಿದ್ದರೆ, ಪಕ್ಷವು ಅವರನ್ನು ತಕ್ಷಣ ಹೊರಹಾಕಲಿ. ಕಾಂಗ್ರೆಸ್ ನಿರಂತರವಾಗಿ ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿದೆ. ಕಾಂಗ್ರೆಸ್ ಪಕ್ಷವು, ಕಾಶ್ಮೀರ ಮತ್ತು ಅಲ್ಲಿನ ಜನರು ಭಾರತಕ್ಕೆ ಸೇರಿದವರು ಎಂದು ಹೇಳಬೇಕು. ಆದರೆ ಅವರು ಹಾಗೆ ಹೇಳುವುದಿಲ್ಲ. 370 ನೇ ವಿಧಿಯನ್ನು ರದ್ದುಗೊಳಿಸುವುದನ್ನು ರಾಹುಲ್ ಗಾಂಧಿ ವಿರೋಧಿಸಿದರು. ಕಾಂಗ್ರೆಸ್ ಪಕ್ಷದ ಉದ್ದೇಶವೇನು? ಮತ್ತೊಮ್ಮೆ ಅಧಿಕಾರಕ್ಕೆ ಬರಲು ನಮ್ಮ ದೇಶದ ಯಾವುದೇ ಭಾಗಗಳನ್ನು ಮಾರಾಟ ಮಾಡಲು ಸಿದ್ಧರಾಗಿದ್ದಾರೆಯೇ? ಅಧಿಕಾರಕ್ಕಾಗಿ ಯಾವುದೇ ಅಗ್ಗದ ತಂತ್ರಗಳನ್ನು ಆಡಲು ಕಾಂಗ್ರೆಸ್ ಸಿದ್ಧವಾಗಿದೆ ಎಂದು ಅದು ಮತ್ತೊಮ್ಮೆ ಈ ಮುಖಾಂತರ ಸಾಬೀತುಪಡಿಸಿದೆ.
ಕಾಂಗ್ರೆಸ್ ರಾಷ್ಟ್ರೀಯ ಪಕ್ಷವಲ್ಲ. ಇದು ರಾಷ್ಟ್ರ ವಿರೋಧಿ ಪಕ್ಷ ಮತ್ತು ಈಗ ಅದು ಸಾಬೀತಾಗಿದೆ ಎಂದು ಕರಂದ್ಲಾಜೆ ಹೇಳಿದರು.
ದಿಗ್ವಿಜಯ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ನಾನು ಕಾಂಗ್ರೆಸ್ ಹೈಕಮಾಂಡ್ ಸೋನಿಯಾ ಗಾಂಧಿಯನ್ನು ಒತ್ತಾಯಿಸುತ್ತೇನೆ. ಅವರು ಯಾಕೆ ಮೌನವಾಗಿದ್ದಾರೆ? ಕಾಶ್ಮೀರದ ಬಗ್ಗೆ ಕಾಂಗ್ರೆಸ್ ಅಭಿಪ್ರಾಯವೇನು? ದಿಗ್ವಿಜಯ್ ಸಿಂಗ್ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಸಂಬಂಧಪಟ್ಟ ಪೊಲೀಸ್ ಇಲಾಖೆಗೆ ಒತ್ತಾಯಿಸುತ್ತೇನೆ ಎಂದು ಶೋಭಾ ಕರಂದ್ಲಾಜೆ ಹೇಳಿದರು.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1403510566732320771?s=19
https://twitter.com/SaakshaTv/status/1403205441136517123?s=19
https://twitter.com/SaakshaTv/status/1403178218702651395?s=19
ಮೂತ್ರಪಿಂಡದ ಕಲ್ಲು/ಕಿಡ್ನಿ ಸ್ಟೋನ್ ಗೆ ಕಾರಣವಾಗುವ ಅಂಶಗಳು#Saakshatv #healthtips #kidney #stone https://t.co/myw8kCsv0i
— Saaksha TV (@SaakshaTv) June 12, 2021
https://twitter.com/SaakshaTv/status/1403555808617566212?s=19
#Congress #antinational party #ShobhaKarandlaje








