ಕೊರೊನಾ ರಿಪೋರ್ಟ್ Corona Report | ಕಳೆದ 24 ಗಂಟೇಲಿ 70,421 ಮಂದಿಗೆ ಸೋಂಕು
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 70,421 ಮಂದಿಯಲ್ಲಿ ಹೊಸದಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 1,19,501 ಸೋಂಕಿತರು ಕೊರೊನಾದಿಂದ ಗುಣಮುಖರಾಗಿದ್ದಾರೆ.
ಕೇಂದ್ರ ಸಚಿವಾಲಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 70,421 ಕೊರೊನಾ ಕೇಸ್ ಗಳು ದೇಶದಲ್ಲಿ ಪತ್ತೆಯಾಗಿದ್ದು, ಮಹಾಮಾರಿಗೆ 3,921 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,95,10,410 ಕ್ಕೆ ಕೊರೊನಾಗೆ ಬಲಿಯಾದವರ ಸಂಖ್ಯೆ 3,74,305 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 1,19,501 ಸೋಂಕಿತರ ಕೊರೊನಾದಿಂದ ಗುಣಮುಖರಾಗಿದ್ದು, ಈವರೆಗೂ 2,81,62,947 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿನ್ನೂ 9,73,158 ಸಕ್ರಿಯ ಪ್ರಕರಣಗಳಿವೆ.