ಅತ್ಯಾಚಾರವೆಸಗಿ ಜೈಲು ಸೇರಿದ್ದ – ಜಾಮೀನಿನ ಮೇಲೆ ಹೊರ ಬಂದು ಸಂತ್ರಸ್ತೆ ಕೊಂದ ಕಿಡಿಗೇಡಿ
ರಾಜಸ್ತಾನ : ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಜೈಲು ಸೇರಿದ್ದ ಕಾಮುಕನೋರ್ವ ಜಾಮೀನಿನ ಮೇಲೆ ಹೊರಬಂದು , ಅತ್ಯಾಚಾರ ಸಂತ್ರಸ್ತೆಯ ಕೊಲೈಎ ಮಾಡಿರುವ ಹೇಯ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ನಡೆದಿದೆ..
ಅಂಗವಾಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂತ್ರಸ್ತೆ ಮಹಿಳೆಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ.. ಆಕೆ 2017ರಲ್ಲಿ ಗಂಡನಿಂದ ದೂರಾಗಿದ್ದಳು. ಒಂಟಿಯಾಗಿ ಬದುಕುತ್ತಿದ್ದ ಮಹಿಳೆಯನ್ನ ಕಾಮುಕ 2017ರಲ್ಲಿಯೇ ಅತ್ಯಾಚಾರ ಮಾಡಲು ಪ್ರಯತ್ನಿಸಿದ್ದ. ಆಗ ಮಹಿಳೆ ಹೇಗೋ ತಪ್ಪಿಸಿಕೊಂಡಿದ್ದಳು. ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಅದಾದ ನಂತರ 2020ರಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕ ಜೈಲು ಸೇರಿದ್ದ.
ಆದರೆ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದ ಕಾಮುಕ ಮಾರುವೇಷದಲ್ಲಿ ಸಂತ್ರಸ್ತೆಯ ಮನೆಗೆ ನುಗ್ಗಿ ಆಕೆಯ ಮೇಲೆ ಹಲ್ಲೆ ಮಾಡಿದ್ದಾನೆ. ಜೊತೆಗೆ ಅಲ್ಲೇ ಇದ್ದ ಆಕೆಯ ಸಹೋದರಿಗಗೂ ಚಾಕುವಿನಿಂದ ಇರಿದಿದ್ದಾನೆ. ಮಹಿಳೆಯರು ಕೂಗಾಡುವುದನ್ನು ಕೇಳಿ ಓಡಿಬಂದ ಗ್ರಾಮಸ್ಥರು ತಕ್ಷಣ ಅವರಿಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅತ್ಯಾಚಾರ ಸಂತ್ರಸ್ತೆ ಮೃತಪಟ್ಟಿದ್ದಾಳೆ. ಆಕೆಯ ಸಹೋದರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಆರೋಪಿಯು ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಹುಡುಕಾಟ ನಡೆಸುತ್ತಿದ್ಧಾರೆ ಎನ್ನಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








