ಭಾರಿ ವರ್ಷಧಾರೆ : ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಬೆಂಗಳೂರು : ರಾಜ್ಯದಲ್ಲಿ ಮಾನ್ಸೂನ್ ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಈಗಾಗಲೇ ಭಾರಿ ಮಳೆಯಾಗುತ್ತಿದೆ. ಅಲ್ಲಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ.
ಈ ಮಧ್ಯೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಗಳಿರುವುದರಿಂದ ಜೂನ್ 15ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅಲ್ಲದೆ ಪೂರ್ವ ಅರಬ್ಬಿ ಸಮುದ್ರದ ಕರ್ನಾಟಕದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಜೂ.18ರವರೆಗೆ ವ್ಯಾಪಕ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ.
ಹೀಗಾಗಿ ಜೂನ್ 17 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೂನ್ 18 ರಂದು ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಇತ್ತ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಗದಗ್ ಜಿಲ್ಲೆಗೆ ಜೂನ್ 17ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಜೂನ್ 17 ವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.








