ಸಣ್ಣ ದೇಶಗಳ ಗುಂಪು ವಿಶ್ವದ ಭವಿಷ್ಯ ನಿರ್ಧರಿಸುತ್ತಿದ್ದ ಕಾಲ ಮುಗಿದಿದೆ – ಚೀನಾ
ಚಿಕ್ಕ ಚಿಕ್ಕ ದೇಶಗಳ ಗುಂಪು ವಿಶ್ವದ ಭವಿಷ್ಯವನ್ನು ನಿರ್ಧರಿಸುವ ಕಾಲ ಮುಗಿದಿದೆ ಎಂದು ಚೀನಾ ಹೇಳಿದೆ. ಬ್ರಿಟನ್ನಲ್ಲಿ ನಡೆಯುತ್ತಿರುವ ಜಿ- 7 ಶೃಂಗಸಭೆಯನ್ನು ಉದ್ದೇಶಿಸಿ ಮಾತನಾಡಿರೋ ಚೀನಾ ಈ ರೀತಿಯಾದ ಹೇಳಿಕೆ ನೀಡಿದೆ.. ಅಂದ್ಹಾಗೆ ಜಗತ್ತಿನ ಪ್ರಮುಖ ಆರ್ಥಿಕ ಬಲಾಡ್ಯ ದೇಶಗಳಾದ ಅಮೆರಿಕ, ಜರ್ಮನಿ, ಇಟಲಿ, ಜಪಾನ್ , ಕೆನಡಾ, ಫ್ರಾನ್ಸ್, ಮತ್ತು ಇಂಗ್ಲೆಂಡ್ ಸೇರಿ ಮಾಡಿಕೊಂಡಿರುವ ಅನಧಿಕೃತ ಒಕ್ಕೂಟ ಜಿ–7. ಯುರೋಪಿಯನ್ ಒಕ್ಕೂಟದ ಸದಸ್ಯ ರಾಷ್ಟ್ರಗಳು, ಇತರೇ ಆಹ್ವಾನಿತ ದೇಶಗಳೊಂದಿಗೆ ಪ್ರತಿ ವರ್ಷ ವಾರ್ಷಿಕ ಜಿ–7 ಶೃಂಗಸಭೆ ನಡೆಸುತ್ತವೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








