ಕೊರೊನಾ ರಿಪೋರ್ಟ್ Corona Report : ಕಳೆದ 24 ಗಂಟೇಲಿ 60,471 ಮಂದಿಗೆ ಸೋಂಕು
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಕಡಿಮೆ ಆಗುತ್ತಾ ಸಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 60,471 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಂದೇ ದಿನದಲ್ಲಿ 2726 ಮಂದಿ ಮೃತಪಟ್ಟಿದ್ದಾರೆ.
ಕೇಂದ್ರ ಸಚಿವಾಲಯದ ಮಾಹಿತಿ ಪ್ರಕಾರ, ನಿನ್ನೆ 60,471 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, ಒಂದೇ ದಿನದಲ್ಲಿ 2726 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 2,95,70,881ಕ್ಕೆ ಮೃತಪಟ್ಟವರ ಸಂಖ್ಯೆ 3,77,031ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1,17,525 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದುವರೆಗೆ 2,82,80,472 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದಾರೆ. ದೇಶದಲ್ಲಿನ್ನೂ 9,13,378 ಸಕ್ರಿಯ ಪ್ರಕರಣಗಳಿವೆ.










