ಪೊಲೀಸ್ ಗೌರವಗಳೊಂದಿಗೆ ಸಂಚಾರಿ ವಿಜಯ್ ಅಂತ್ಯ ಸಂಸ್ಕಾರ : ಸಿಎಂ
ಬೆಂಗಳೂರು : ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ಅವರ ಅಂತ್ಯ ಸಂಸ್ಕಾರವನ್ನು ಪೊಲೀಸ್ ಗೌರವಗಳೊಂದಿಗೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ‘ರಾಷ್ಟ್ರ ಪ್ರಶಸ್ತಿ ಪುರಸ್ಕøತ ನಟ ಸಂಚಾರಿ ವಿಜಯ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನಡೆಸಲಾಗುವುದು.
ಅವರ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿರುವ ಕುಟುಂಬದವರಿಗೆ ಕೃತಜ್ಞತೆಗಳ ಜೊತೆಗೆ ಸಂತಾಪ ಸೂಚಿಸುತ್ತಾ, ಪ್ರತಿಭಾವಂತ ಕಲಾವಿದ ಸಂಚಾರಿ ವಿಜಯ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.









