ವಲಸಿಗರಿಂದ ನಾಯಕತ್ವ ಗೊಂದಲ ಸೃಷ್ಟಿ : ಸಚಿವ ಈಶ್ವರಪ್ಪ
ಶಿವಮೊಗ್ಗ ; 17 ಶಾಸಕರು ಕಾಂಗ್ರೆಸ್, ಜೆಡಿಎಸ್ ನಲ್ಲಿ ಆಡಳಿತ ಸರಿಯಾಗಿಲ್ಲ ಎಂದು ಆರೋಪಿಸಿ ಆ ಪಕ್ಷ ಬಿಟ್ಟು ಬಂದರು. ಆಮೇಲೆ ಇಂತಹ ಸಮಸ್ಯೆಗಳು ಎದುರಾಗಿವೆ ಎಂದು ವಲಸಿಗ ಬಿಜೆಪಿಗರ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ನಾಯಕತ್ವದ ಬದಲಾವಣೆ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಮೊದಲೇ ಬಿಜೆಪಿಗೆ ಬಹುಮತವಿದ್ದಿದ್ದರೆ ಈಗ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯೇ ಬರುತ್ತಿರಲಿಲ್ಲ.
17 ಶಾಸಕರು ಕಾಂಗ್ರೆಸ್, ಜೆಡಿಎಸ್ ನಲ್ಲಿ ಆಡಳಿತ ಸರಿಯಾಗಿಲ್ಲ ಎಂದು ಆರೋಪಿಸಿ ಆ ಪಕ್ಷ ಬಿಟ್ಟು ಬಂದರು. ಆಮೇಲೆ ಇಂತಹ ಸಮಸ್ಯೆಗಳು ಎದುರಾಗಿವೆ ಎಂದು ದೂರಿದರು.
ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.
ನಮ್ಮ ಪಕ್ಷದ ನಾಯಕರ ಜೊತೆ 4 ಗೋಡೆಯ ಮದ್ಯೆ ಎಲ್ಲರೂ ಕೂತು ಚರ್ಚೆ ಮಾಡಿ ಗೊಂದಲಕ್ಕೆ ತೆರೆ ಎಳೆಯುತ್ತೇವೆ.
ನಾಯಕತ್ವ ಬದಲಾವಣೆ ಚರ್ಚೆಯ ಎಲಾ ಗೊಂದಲಕ್ಕೂ ಕೊನೆ ಹಾಡಲಾಗುತ್ತೆ ಎಂದು ತಿಳಿಸಿದ್ದಾರೆ.









