ರಾಮಮಂದಿರ ನಿರ್ಮಾಣದಲ್ಲೇ ಅಕ್ರಮ ಎಸಗಿರುವುದು ದೇಶಕ್ಕೆ ಅಪಮಾನ
ಮಂಡ್ಯ : ರಾಮಮಂದಿರ ನಿರ್ಮಾಣದಲ್ಲೇ ಅಕ್ರಮ ಎಸಗಿರುವುದು ದೇಶಕ್ಕೆ ದೊಡ್ಡ ಅಪಮಾನ. ಭಾರತೀಯ ಸಂಸ್ಕøತಿಗೆ ನಮ್ಮ ಭಾವನೆಗೆ, ಧರ್ಮಕ್ಕೆ ಮಾಡಿದ ಅಪಚಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ಹೊರಹಾಕಿದರು.
ರಾಮಮಂದಿರ ಭೂಮಿ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ವಿಚಾರವಾಗಿ ಮಂಡ್ಯದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ರಾಮಮಂದಿರ ಭೂಮಿ ಖರೀದಿಯಲ್ಲಿ ದೊಡ್ಡ ಹಗರಣ ನಡೆದಿರುವುದು ಬೆಳಕಿಗೆ ಬಂದಿದೆ.
ಇದು ಇಡೀ ದೇಶ ಹಾಗೂ ಜನರ ಭಾವನೆಗೆ ಮಾಡಿರುವ ಅಪಮಾನ. ಈ ಹಗರಣದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ರಾಮ ಮಂದಿರ ನಿರ್ಮಾಣಕ್ಕೆ ಜನಸಾಮಾನ್ಯರು ತಮ್ಮ ಉಳಿತಾಯದ ಹಣವನ್ನು ದೇಣಿಗೆಯಾಗಿ ನೀಡಿದ್ದರು. ಇಟ್ಟಿಗೆಗಳನ್ನು ಕೊಟ್ಟಿದ್ದಾರೆ.
ಆದರೆ ರಾಮಮಂದಿರ ನಿರ್ಮಾಣದಲ್ಲೇ ಅಕ್ರಮ ಎಸಗಿರುವುದು ದೇಶಕ್ಕೆ ದೊಡ್ಡ ಅಪಮಾನ. ಭಾರತೀಯ ಸಂಸ್ಕøತಿಗೆ ನಮ್ಮ ಭಾವನೆಗೆ, ಧರ್ಮಕ್ಕೆ ಮಾಡಿದ ಅಪಚಾರವಾಗಿದೆ.
ರಾಮ ಮಂದಿರ ನಿರ್ಮಾಣಕ್ಕಾಗಿ ಹಳ್ಳಿ, ಹಳ್ಳಿಗಳಲ್ಲಿ ಜನ ದೇಣಿಗೆ ಸಂಗ್ರಹಿಸಿ ಕೊಟ್ಟಿದ್ದಾರೆ. ಹೀಗಿರುವಾಗ ಇವರು ಭೂಮಿ ಖರೀದಿಯಲ್ಲಿ ಅವ್ಯವಹಾರ ಮಾಡಿ ದ್ರೋಹ ಬಗೆದಿದ್ದಾರೆ.
ಈ ಹಗರಣದಲ್ಲಿ ಭಾಗಿಯಾದವರನ್ನು ಬಂಧಿಸಿ, ಶಿಕ್ಷೆ ನೀಡಬೇಕು ಎಂದು ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರವನ್ನು ಆಗ್ರಹಿಸಿದರು.









