ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್- ಟೀಮ್ ಇಂಡಿಯಾದ ಲೀಸ್ಟ್ ನಲ್ಲಿ ಕೆ.ಎಲ್. ರಾಹುಲ್, ಮಯಾಂಕ್ ಹೆಸರಿಲ್ಲ..!
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯಕ್ಕೆ 15 ಸದಸ್ಯರನ್ನೊಳಗೊಂಡ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ.
ವಿರಾಟ್ ಕೊಹ್ಲಿಯ 15ರ ಬಳಗದಲ್ಲಿ ಕೆ.ಎಲ್. ರಾಹುಲ್, ಮಯಾಂಕ್ ಅಗರ್ ವಾಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಥಾಕೂರ್, ಅಕ್ಷರ್ ಪಟೇಲ್ ಅವರನ್ನು ಆಯ್ಕೆ ಮಾಡಲಾಗಿಲ್ಲ.
ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್ ಮತ್ತು ಶಾರ್ದೂಲ್ ಥಾಕೂರ್ ಅವರು ಕಳೆದ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಸರಣಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡಿದ್ದರು.
ಇನ್ನು ಕೆ.ಎಲ್. ರಾಹುಲ್ ಗೆ ಅವಕಾಶ ಸಿಕ್ಕಿಲ್ಲ. ಹಾಗೇ ಮಯಾಂಕ್ ಅಗರ್ ವಾಲ್ ಅವರನ್ನು ಕಡೆಗಣಿಸಲಾಗಿದೆ. ಈ ನಡುವೆ, ಶುಬ್ಮನ್ ಗಿಲ್ ಅವರು ರೋಹಿತ್ ಶರ್ಮಾ ಜೊತೆ ಇನಿಂಗ್ಸ್ ಆರಂಭಿಸಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಶುಬ್ಮನ್ ಗಿಲ್ ಅವರು ಕೇವಲ 119 ರನ್ ಗಳಿಸಿದ್ದರು.
ಇನ್ನೊಂದೆಡೆ ಉಮೇಶ್ ಯಾದವ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟೀಮ್ ಇಂಡಿಯಾದ 15ರ ಬಳಗದಲ್ಲಿ ಐದು ಮಂದಿ ವೇಗಿಗಳಿದ್ದು,ಇಬ್ಬರು ವಿಕೆಟ್ ಕೀಪರ್ ಗಳಿದ್ದಾರೆ. ಆರ್. ಅಶ್ವಿನ್ ಮತ್ತು ರವೀಂದ್ರ ಜಡೇಜಾ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಇಂಗ್ಲೆಂಡ್ ಸರಣಿಯ ವೇಳೆ ಗಾಯಗೊಂಡಿದ್ದ ಹನುಮ ವಿಹಾರಿ ಅವರು 15ರ ಬಳಗದಲ್ಲಿದ್ದಾರೆ.
ಆದ್ರೆ ಅಂತಿಮ ಹನ್ನೊಂದರ ಬಳಗದಲ್ಲಿ ಯಾರು ಎಲ್ಲಾ ಕಾಣಿಸಿಕೊಳ್ಳುತ್ತಾರೆ ಅನ್ನೋದನ್ನು ಕಾದು ನೋಡಬೇಕು.
ಜೂನ್ 18ರಿಂದ ಸೌತಾಂಪ್ಟನ್ ನಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ.
ಟೀಮ್ ಇಂಡಿಯಾದ 15ರ ಬಳಗ
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್, ವೃದ್ದಿಮಾನ್ ಸಾಹ, ಆರ್. ಅಶ್ವಿನ್, ರವೀಂದ್ರ ಜಡೇಜಾ, ಜಸ್ಪ್ರಿತ್ ಬೂಮ್ರಾ, ಇಶಾಂತ್ ಶರ್ಮಾ, ಮಹಮ್ಮದ್ ಶಮಿ, ಉಮೇಶ್ ಯಾದವ್, ಮಹಮ್ಮದ್ ಸಿರಾಜ್.