ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣುತ್ತಿದ್ದಾರೆ : ರೇಣುಕಾಚಾರ್ಯ ಗರಂ
ಬೆಂಗಳೂರು : ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣುತ್ತಿದ್ದಾರೆ. ಸೂಟು ಬೂಟು ಅವರ ಕ್ಷೇತ್ರದ ಜಾತ್ರೆಯಲ್ಲಿ ಹಾಕಿಕೊಳ್ಳಲಿ.
ಧಾರವಾಡ, ವಿಜಯಪುರದ ಶಾಸಕರು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಸ್ವಪಕ್ಷ ಶಾಸಕರ ವಿರುದ್ಧವೇ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ.
ಅರುಣ್ ಸಿಂಗ್ ಭೇಟಿ ಬಗ್ಗೆ ದಾವಣಗೆರೆಯಲ್ಲಿ ಮಾತನಾಡಿದ ಅವರು, ಇಂದು ರಾಜ್ಯಕ್ಕೆ ಅರುಣ್ ಸಿಂಗ್ ಭೇಟಿ ನೀಡಲಿದ್ದಾರೆ.
ನಾಯಕತ್ವ ಬದಲಾವಣೆ ಚರ್ಚೆಗೆ ತೆರೆ ಬೀಳಲಿದ್ದು, ಬಿಎಸ್ ವೈ ವಿರುದ್ಧ ತಂತ್ರಗಾರಿಕೆ ನಡೆಸುತ್ತಿರುವ ಕೆಲ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಲಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಪರ 65 ಶಾಸಕರ ಸಹಿ ಸಂಗ್ರಹ ಮಾಡಿರುವುದು ಸತ್ಯ. ಇದರಲ್ಲಿ ಯಾವುದೇ ಅನುಮಾನಗಳು ಬೇಡ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿಗೆ ಸಮಯ ನೀಡಿದ್ದು, ಸಹಿ ಸಂಗ್ರಹವನ್ನು ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನು ಯಾರೋ ಮೂವರು ದೆಹಲಿಗೆ ಹೋಗಿ ವರಿಷ್ಠರ ಮನೆ ಗೇಟ್ ಮುಟ್ಟಿಬಂದರೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಲ್ಲ.
ಕೆಲವರು ಸೂಟು ಹೊಲಿಸಿ ಸಿಎಂ ಕನಸು ಕಾಣುತ್ತಿದ್ದಾರೆ. ಸೂಟು ಬೂಟು ಅವರ ಕ್ಷೇತ್ರದ ಜಾತ್ರೆಯಲ್ಲಿ ಹಾಕಿಕೊಳ್ಳಲಿ ಎಂದು ಗರಂ ಆದರು.